ಶುಕ್ರವಾರ, ಅಕ್ಟೋಬರ್ 7, 2022
24 °C

ಮಹೇಶ ಪಾಟೀಲ ಗಾದಗಿ ತಹಶೀಲ್ದಾರ್ 

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್‌: ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಬೀದರ್‌ ತಾಲ್ಲೂಕಿನ ಗಾದಗಿ ಗ್ರಾಮದ ಮಹೇಶ ಮಾಣಿಕರಾವ್ ಪಾಟೀಲ ತಹಶೀಲ್ದಾರ್‌ ಹುದ್ದೆಗೆ ನೇಮಕಗೊಂಡಿದ್ದಾರೆ.

ತಂದೆ ಮಾಣಿಕರಾವ್ ಕೃಷಿಕರಾಗಿದ್ದಾರೆ. ತಾಯಿ ಬೀದರ್‌ನ ನಾವದಗೇರಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕಿಯಾಗಿದ್ದಾರೆ.

ಮಹೇಶ ಅವರು ನಗರದ ದತ್ತಗಿರಿ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ, ಜಿ.ಎನ್. ಪಬ್ಲಿಕ ಶಾಲೆಯಲ್ಲಿ ಪ್ರೌಢ, ಮಾತೆ ಮಾಣಿಕೇಶ್ವರಿ ಕಾಲೇಜಿನಲ್ಲಿ ಪಿಯುಸಿ ಓದಿದ್ದಾರೆ. ಬೆಂಗಳೂರಿನ ವಿಶ್ವವಿದ್ಯಾಲಯದ ಯುವಿಸಿಇದಿಂದ 2014ರಲ್ಲಿ ಬಿ.ಇ (ಮೆಕ್ಯಾನಿಕಲ್‌) ಪದವಿ ಪಡೆದಿದ್ದಾರೆ. ಖಾಸಗಿ ಕಂಪನಿಗಳಲ್ಲಿ ಕೆಲಸ ಮಾಡುತ್ತ ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ಧತೆ ಮಾಡಿಕೊಂಡಿದ್ದರು. ಈಚೆಗೆ ನಡೆದ ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದಾರೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.