ಗುರುವಾರ , ಆಗಸ್ಟ್ 11, 2022
23 °C

ಮೈಲಾರ ಮಲ್ಲಣ್ಣ ಜಾತ್ರೆ ಇಲ್ಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ಭಾಲ್ಕಿ ತಾಲ್ಲೂಕಿನ ಖಾನಾಪುರದ ಮೈಲಾರ ಮಲ್ಲಣ್ಣ ದೇವಸ್ಥಾನದ ಈ ಬಾರಿಯ ಜಾತ್ರೆ ರದ್ದುಪಡಿಸಿದ್ದು, ಭಕ್ತರು ಸಹಕರಿಸಬೇಕು ಎಂದು ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಅನಂತರಾವ್ ಕುಲಕರ್ಣಿ ಮನವಿ ಮಾಡಿದ್ದಾರೆ.

ಕೋವಿಡ್ ಕಾರಣ ಡಿಸೆಂಬರ್ 20ರಿಂದ 2021ರ ಜನವರಿ 20ರ ವರೆಗೆ ನಡೆಯಲಿದ್ದ ಜಾತ್ರೆಯನ್ನು ರದ್ದುಪಡಿಸಲಾಗಿದೆ ಎಂದು ಹೇಳಿದ್ದಾರೆ.

ಡಿ.20, 27, ಜನವರಿ 3 ಹಾಗೂ ಜ.10ರ ಭಾನುವಾರದ ಜಾತ್ರೆ ಇರುವುದಿಲ್ಲ. ನಾಲ್ಕೂ ಭಾನುವಾರ ದೇವಸ್ಥಾನ ಪರಿಸರದಲ್ಲಿ ಯಾವುದೇ ಅಂಗಡಿಗಳನ್ನು ತೆರೆಯಲು ಹಾಗೂ ಭಕ್ತರ ಓಡಾಟಕ್ಕೆ ಅವಕಾಶ ಇರುವುದಿಲ್ಲ ಎಂದು ತಿಳಿಸಿದ್ದಾರೆ.

ಉಳಿದ ದಿನಗಳಲ್ಲಿ ಭಕ್ತರು ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಯ್ದುಕೊಂಡು ದೇವರ ದರ್ಶನ ಮಾತ್ರ ಪಡೆಯಬಹುದಾಗಿದೆ ಎಂದು ತಿಳಿಸಿದ್ದಾರೆ.

ಕೊರೊನಾ ಸೋಂಕಿನ ಪ್ರಯುಕ್ತ ಪ್ರಸಕ್ತ ವರ್ಷ ಜಾತ್ರೆಯ ಸಾಂಕೇತಿಕ ಆಚರಣೆ ಮಾತ್ರ ಇರಲಿದೆ ಎಂದು ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು