ಮಾನಸಿಕ ಆರೋಗ್ಯ ಕಾಪಾಡಿ

ಬೀದರ್: ಪೊಲೀಸರು ದೈಹಿಕ ಆರೋಗ್ಯದ ಜತೆಗೆ ಮಾನಸಿಕ ಆರೋಗ್ಯವನ್ನೂ ಕಾಪಾಡಿಕೊಳ್ಳಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡೆಕ್ಕ ಕಿಶೋರಬಾಬು ಹೇಳಿದರು.
ಇಲ್ಲಿಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ಪೊಲೀಸ್ ಸಿಬ್ಬಂದಿಗೆ ಆಯೋಜಿಸಿದ್ದ ಮಾನಸಿಕ ಆರೋಗ್ಯ ಕುರಿತ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಮಾನಸಿಕ ಆರೋಗ್ಯಕ್ಕೆ ಸಂಬಂಧಿಸಿದಂತೆ ಏನೇ ಸಮಸ್ಯೆಗಳಿದ್ದರೂ ಮುಜುಗರಪಡದೆ ಮನೋವೈದ್ಯರ ಸಲಹೆ ಪಡೆಯಬೇಕು ಎಂದು ತಿಳಿಸಿದರು.
ಜಿಲ್ಲಾ ಮಾನಸಿಕ ಆರೋಗ್ಯ ಅಧಿಕಾರಿ ಡಾ. ಕಿರಣ ಪಾಟೀಲ, ಬ್ರಿಮ್ಸ್ ಮನೋವೈದ್ಯರಾದ ರಾಘವೇಂದ್ರ ವಾಘಲೆ, ಅಮಲ್ ಷರೀಫ್ ಮಾತನಾಡಿದರು. ಆಪ್ತ ಸಮಾಲೋಚಕಿ ರೇಣುಕಾ ಟಿ, ಪರಶುರಾಮ ಜಿ. ತಗನೂರ್, ಅಂಬಾದಾಸ್, ಪ್ರಮೋದ್ ಇದ್ದರು.
ಜಿಲ್ಲಾ ಕುಷ್ಠರೋಗ ನಿಯಂತ್ರಣ ಕಾರ್ಯಕ್ರಮದ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವೀರಶೆಟ್ಟಿ ಚನಶೆಟ್ಟಿ ನಿರೂಪಿಸಿದರು. ಮಲ್ಲಿಕಾರ್ಜುನ ಗುಡ್ಡೆ ಸ್ವಾಗತಿಸಿದರು. ಸೀಮಪ್ಪ ಸರಕುರೆ ವಂದಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.