ಬೀದರ್: ರಾಜಕೀಯದಲ್ಲಿ ಮಹಿಳೆಯರಿಗೆ ಶೇ 50 ರಷ್ಟು ಮೀಸಲು ಕಲ್ಪಿಸಬೇಕು ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಶಿವಾನಂದ ಮಂಠಾಳಕರ್ ಪ್ರತಿಪಾದಿಸಿದರು.
ನಗರದ ಬಿಜೆಪಿ ಜಿಲ್ಲಾ ಘಟಕದ ಕಚೇರಿಯಲ್ಲಿ ಶನಿವಾರ ನಡೆದ ಪಕ್ಷದ ಮಹಿಳಾ ಮೋರ್ಚಾ ಜಿಲ್ಲಾ ಘಟಕದ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಪಕ್ಷಕ್ಕಾಗಿ ದುಡಿದವರಿಗೆ ಒಳ್ಳೆಯ ಅವಕಾಶಗಳು ದೊರೆಯಲಿವೆ ಎಂದು ತಿಳಿಸಿದರು.
ಮಹಿಳಾ ಮೋರ್ಚಾ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಚಂದ್ರಮ್ಮ ಪಾಟೀಲ, ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾಬುವಾಲಿ, ಪಕ್ಷದ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಅರಹಂತ ಸಾವಳೆ ಮಾತನಾಡಿದರು.
ಮಹಿಳಾ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷೆ ಲುಂಬಿಣಿ ಗೌತಮ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷೆ ಮಾಯಾವತಿ ಸಿಂಧನಕೇರಾ, ಪ್ರಸನ್ನಲಕ್ಷ್ಮಿ ದೇಶಪಾಂಡೆ, ಶೋಭಾ ತೆಲಂಗ್, ರೂಪಾ ಜಾಧವ್, ಸಂಗೀತಾ ಅಕಡೆ, ಮಹಾನಂದಾ ಕೋಟೆ, ಪ್ರೇಮಾ, ಸವಿತಾ, ಸಂಗೀತಾ, ಮೀನಾ, ಅಂಬವ್ವ, ಸುವರ್ಣ ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.