ಬೀದರ್: ‘ರಾಜ್ಯದಲ್ಲಿ ಬಿಜೆಪಿ ಸಂಘಟನೆಯನ್ನು ಇನ್ನಷ್ಟು ಬಲಪಡಿಸುವ ದಿಸೆಯಲ್ಲಿ ಕಾರ್ಯಕರ್ತರು ಕಾರ್ಯ ಪ್ರವೃತ್ತರಾಗಬೇಕು. ಈಶಾನ್ಯ ಶಿಕ್ಷಕರ ಮತಕ್ಷೇತ್ರದ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಲು ಶಕ್ತಿ ಮೀರಿ ಪ್ರಯತ್ನಿಸಬೇಕು’ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.

ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶಶಿಲ್ ನಮೋಶಿ ಪ್ರಚಾರದ ಪ್ರಯುಕ್ತ ಬೀದರ್ನಲ್ಲಿ ಬುಧವಾರ ನಡೆದ ಬಿಜೆಪಿ ಪ್ರಮುಖ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.

‘1999ರಲ್ಲಿ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಬೀದರ್ ಜಿಲ್ಲೆಯಿಂದ ಬಿಜೆಪಿಯ ನಾಲ್ವರು ಚುನಾಯಿತರಾಗಿದ್ದರು. ಆಗಿನ ಪ್ರಯತ್ನವೇ ಇಂದು ಕಾಂಗ್ರೆಸ್ನ ಹೆಣ ಹೊರಲು ನೆರವಾಯಿತು. ಕಾರ್ಯಕರ್ತರ ಪರಿಶ್ರಮದ ಫಲವಾಗಿಯೇ ಇಂದು ಬಿಜೆಪಿ ಕೇಂದ್ರ ಹಾಗೂ ರಾಜ್ಯದಲ್ಲಿ ಅಧಿಕಾರದಲ್ಲಿದೆ ಇದೆ’ ಎಂದು ತಿಳಿಸಿದರು.

ವಿಧಾನಸಭೆಯ ಉಪ ಚುನಾವಣೆಯಲ್ಲಿ ಆರ್.ಆರ್.ನಗರ ಹಾಗೂ ಶಿರಾ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿಗಳು ಸುಲಭವಾಗಿ ಜಯ ಸಾಧಿಸಲಿದ್ದಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಶಿವಾನಂದ ಮಂಠಾಳಕರ್ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್, ಸಂಸದ ಭಗವಂತ ಖೂಬಾ, ವಿಧಾನ ಪರಿಷತ್ ಸದಸ್ಯ ರಘುನಾಥರಾವ್ ಮಲ್ಕಾಪುರೆ, ಈಶಾನ್ಯ ಶಿಕ್ಷಕರ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶಶಿಲ್ ನಮೋಶಿ, ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ, ಬಿಜೆಜಿ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷರಾದ ಶಿವರಾಜ್ ಗಂದಗೆ, ಶೈಲೇಂದ್ರ ಬೆಲ್ದಾಳೆ, ಡಿ.ಕೆ.ಸಿದ್ರಾಮ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.