ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಲ್ಲಯ್ಯಗಿರಿ: ರಾಷ್ಟ್ರ ಧ್ವಜ ಹಾರಿಸಿದ ಅವಧೂತರು

Last Updated 13 ಆಗಸ್ಟ್ 2022, 15:57 IST
ಅಕ್ಷರ ಗಾತ್ರ

ಬೀದರ್: ಸ್ವಾತಂತ್ರ್ಯದ ಅಮೃತ ಮಹೋತ್ಸವ ನಿಮಿತ್ತ ಹರ್ ಘರ್ ತಿರಂಗಾ ಅಭಿಯಾನ ಅಂಗವಾಗಿ ಬಸವಲಿಂಗ ಅವಧೂತರು ಇಲ್ಲಿಗೆ ಸಮೀಪದ ಜಹೀರಾಬಾದ್ ತಾಲ್ಲೂಕಿನ ಮಲ್ಲಯ್ಯಗಿರಿ ಆಶ್ರಮದಲ್ಲಿ ರಾಷ್ಟ್ರ ಧ್ವಜ ಹಾರಿಸಿದರು.

ಅನೇಕ ಹೋರಾಟಗಾರರ ತ್ಯಾಗ, ಬಲಿದಾನದಿಂದ ದೇಶ ಸ್ವತಂತ್ರಗೊಂಡಿದೆ. ಈಗ ಅಮೃತ ಮಹೋತ್ಸವ ಆಚರಣೆಯಲ್ಲಿದೆ. ಆಗಸ್ಟ್ 13 ರಿಂದ 15 ರವರೆಗೆ ಎಲ್ಲರೂ ತಮ್ಮ ಮನೆ ಮೇಲೆ ರಾಷ್ಟ್ರ ಧ್ವಜ ಹಾರಿಸಿ ಸಂಭ್ರಮದಲ್ಲಿ ಭಾಗಿಯಾಗಬೇಕು ಎಂದು ಹೇಳಿದರು.

ಬೀದರ್ ಜಿಲ್ಲಾ ಎನ್‍ಜಿಒ ನೌಕರರ ಗೃಹ ನಿರ್ಮಾಣ ಸಹಕಾರ ಸಂಘದ ಅಧ್ಯಕ್ಷ ಬಾಲಾಜಿ ಬಿರಾದಾರ, ನಿವೃತ್ತ ಮುಖ್ಯಶಿಕ್ಷಕ ಸಿದ್ಧಾರೆಡ್ಡಿ ನಾಗೂರಾ ಇದ್ದರು. ದೇವೇಂದ್ರ ಕರಂಜೆ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT