ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

29ರಿಂದ ಮೈಲಾರ ಮಲ್ಲಣ್ಣ ಜಾತ್ರೆ

Last Updated 23 ನವೆಂಬರ್ 2022, 12:34 IST
ಅಕ್ಷರ ಗಾತ್ರ

ಬೀದರ್: ಭಾಲ್ಕಿ ತಾಲ್ಲೂಕಿನ ಖಾನಾಪುರದಲ್ಲಿ ನ.29 ರಿಂದ ಮೈಲಾರ ಮಲ್ಲಣ್ಣ ದೇವರ ಜಾತ್ರಾ ಮಹೋತ್ಸವ ಆರಂಭವಾಗಲಿದ್ದು, ಡಿಸೆಂಬರ್ 31 ರವರೆಗೆ ನಡೆಯಲಿದೆ.

ನ.29 ರಂದು ರಾತ್ರಿ 9.30ಕ್ಕೆ ಮಲ್ಹಾರಿ–ಮಾಳಸಾಕಾಂತೆ ಹಾಗೂ ಭಾನು ಅವರ ಮದುವೆಯೊಂದಿಗೆ ಜಾತ್ರೆಗೆ ಚಾಲನೆ ದೊರಕಲಿದೆ.

ಡಿ.2 ರಂದು ರಾತ್ರಿ 8.30ಕ್ಕೆ ಪಲ್ಲಕ್ಕಿ ಉತ್ಸವ ಹಾಗೂ ನಂದಿ ಮೇಲೆ ದೇವರ ವಿಗ್ರಹ ಮೆರವಣಿಗೆ ಜರುಗಲಿದೆ. ಡಿ. 4 ರಂದು ರಾತ್ರಿ 8.30ಕ್ಕೆ ನವಿಲ ಮೇಲೆ ದೇವರ ವಿಗ್ರಹ ಮೆರವಣಿಗೆ, ಡಿ. 7 ರಂದು ರಾತ್ರಿ 8.30ಕ್ಕೆ ಪಲ್ಲಕ್ಕಿ ಉತ್ಸವ ಮತ್ತು ಕುದುರೆ ಮೇಲೆ ದೇವರ ವಿಗ್ರಹ ಮೆರವಣಿಗೆ, ಡಿ. 11 ರಂದು ಪಲ್ಲಕ್ಕಿ ಉತ್ಸವ ಹಾಗೂ ಆನೆ ಮೇಲೆ ದೇವರ ವಿಗ್ರಹ ಮೆರವಣಿಗೆ, ಡಿ. 18 ರಂದು ಪಲ್ಲಕ್ಕಿ ಉತ್ಸವ ಮತ್ತು ನಂದಿ ಮೇಲೆ ದೇವರ ವಿಗ್ರಹ ಮೆರವಣಿಗೆ ನಡೆಯಲಿದೆ.

ಡಿ. 31 ರಂದು ಬೆಳಿಗ್ಗೆ 11ಕ್ಕೆ ಜಾತ್ರಾ ಮಹೋತ್ಸವದ ಸಮಾರೋಪ ಸಮಾರಂಭ ನಡೆಯಲಿದೆ.

ಭಕ್ತರು ಜಾತ್ರಾ ಮಹೋತ್ಸವದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ದೇವರ ದರ್ಶನ ಪಡೆಯಬೇಕು ಎಂದು ಮಲ್ಲಣ್ಣ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಪ್ರಕಾಶ ಮೇತ್ರೆ ವಡಗಾಂವ್ ಹಾಗೂ ಕಾರ್ಯನಿರ್ವಹಣಾಧಿಕಾರಿ ಅನಂತರಾವ್ ಕುಲಕರ್ಣಿ ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT