ಗುರುವಾರ , ಮೇ 13, 2021
40 °C

ಯಡಿಯೂರಪ್ಪ ಸಾಗುತ್ತಿದ್ದ ರಸ್ತೆಯಲ್ಲಿ ಮಲ್ಲಿಕಾರ್ಜುನ ಖೂಬಾ ಬೆಂಬಲಿಗರಿಂದ ಘೋಷಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಸವಕಲ್ಯಾಣ: ಉಪ ಚುನಾವಣೆ ಅಂಗವಾಗಿ ಬಿಜೆಪಿ ಅಭ್ಯರ್ಥಿ ಶರಣು ಸಲಗರ ಪರ ಪ್ರಚಾರ ಸಭೆಗಳಲ್ಲಿ ಪಾಲ್ಗೊಳ್ಳಲು ಸೋಮವಾರ ಇಲ್ಲಿಗೆ ಬಂದ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸಾಗುತ್ತಿದ್ದ ರಸ್ತೆಯಲ್ಲಿ ಪಕ್ಷೇತರ ಅಭ್ಯರ್ಥಿ ಹಾಗೂ ಮಾಜಿ ಶಾಸಕರಾದ ಮಲ್ಲಿಕಾರ್ಜುನ ಖೂಬಾ ಅವರ ಬೆಂಬಲಿಗರು ಘೋಷಣೆ ಕೂಗಿದರು.

ನಗರಕ್ಕೆ ಪ್ರವೇಶಿಸುವಾಗ ಖೂಬಾ ಅವರ ನಿವಾಸದ ಎದುರು ಅಭ್ಯರ್ಥಿಯ ಚುನಾವಣಾ ಚಿಹ್ನೆ ನೆಗಿಲಿನ ಚಿತ್ರವಿರುವ ಫಲಕಗಳನ್ನು ಹಿಡಿದಿದ್ದ ಕಾರ್ಯಕರ್ತರು ಮಲ್ಲಿಕಾರ್ಜುನ ಖೂಬಾ ಅವರಿಗೆ ಜಯವಾಗಲಿ ಎಂಬ ಘೋಷಣೆ ಕೂಗಿದರು.

ಮಲ್ಲಿಕಾರ್ಜುನ ಖೂಬಾ ಹಾಗೂ ಇತರೆ ಮುಖಂಡರು ಇದ್ದರು. ಪೊಲೀಸ್ ಬಂದೋಬಸ್ತ್ ಇದ್ದ ಕಾರಣ ಕಾರ್ಯಕರ್ತರು ರಸ್ತೆಗೆ ಬರಗೊಡಲಿಲ್ಲ. ಮುಖ್ಯಮಂತ್ರಿ ಜತೆಗಿದ್ದ ವಾಹನಗಳು ಹೋದ ನಂತರ ಮಲ್ಲಿಕಾರ್ಜುನ ಖೂಬಾ  ಕಾರ್ಯಕರ್ತರೊಂದಿಗೆ ಮಾತನಾಡಿ, 'ಸ್ಥಳೀಯರನ್ನು ಕಡೆಗಣಿಸಿ ಹೊರಗಿನವರಿಗೆ ಟಿಕೆಟ್ ನೀಡಿಲಾಗಿದ್ದು. ಇಂದು ಯಡಿಯೂರಪ್ಪ ಅವರು ಭಾಗವಹಿಸುವ ಸಭೆಗಳಿಗೆ ಹೋಗಿ ಅವರನ್ನು ಈ ಬಗ್ಗೆ ವಿಚಾರಿಸುತ್ತೇನೆ. ನೀವು ಮುಖ್ಯಮಂತ್ರಿ ಆಗಲೆಂದು ಜೆಡಿಎಸ್ ತೊರೆದು ಬಿಜೆಪಿಗೆ ಬಂದಿದ್ದೆ. ಹೀಗಿದ್ದಾಗ ನನಗೆ ಟಿಕೆಟ್ ಕೊಡದೆ ಅನ್ಯಾಯ ಏಕೆ ಮಾಡಿದ್ದೀರಿ ಎಂದು ಪ್ರಶ್ನಿಸುತ್ತೇನೆ' ಎಂದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು