ಭಾನುವಾರ, ಸೆಪ್ಟೆಂಬರ್ 19, 2021
30 °C

ಮಾಂಜ್ರಾ ನದಿ ನೀರಿನ ಸೆಳೆತಕ್ಕೆ ವ್ಯಕ್ತಿ ನೀರು ಪಾಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಭಾಲ್ಕಿ: ತಾಲ್ಲೂಕಿನ ಲಖಣಗಾಂವ‌ ಗ್ರಾಮದ ಜ್ಞಾನೇಶ್ವರ ಸ್ವರೂಪರಾವ್ ಚಾಂದಿವಾಲೆ (50) ಅವರು ಬುಧವಾರ ಮಾಂಜ್ರಾ ನದಿ ನೀರಿನ ಸೆಳೆತಕ್ಕೆ ಸಿಲುಕಿ ನೀರು ಪಾಲಾಗಿದ್ದಾರೆ. ವ್ಯಾಪಕ ಮಳೆ ಆದ ಹಿನ್ನೆಲೆಯಲ್ಲಿ ಲಖಣಗಾಂವ ಸೇತುವೆ ಮೇಲಿಂದ ಮಾಂಜ್ರಾ ನದಿಯ ಹೆಚ್ಚುವರಿ ನೀರು ಹರಿಯುತ್ತಿದೆ.

ಇದನ್ನು ಲೆಕ್ಕಿಸದೇ ಸೇತುವೆ ದಾಟಲು ಮುಂದಾದಾಗ ಈ ವ್ಯಕ್ತಿ ನೀರು ಪಾಲಾಗಿದ್ದಾರೆ. ವ್ಯಕ್ತಿಗಾಗಿ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಶೋಧ ಮುಂದುವರಿಸಿದ್ದಾರೆ. ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು