ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸತ್ಸಂಗದಿಂದ ಮನ ಶುದ್ಧಿ: ಬಸವಲಿಂಗ ಪಟ್ಟದ್ದೇವರು

ಭಾಲ್ಕಿ ಹಿರೇಮಠ ಸಂಸ್ಥಾನದ ಬಸವಲಿಂಗ ಪಟ್ಟದ್ದೇವರ ನುಡಿ
Last Updated 14 ಫೆಬ್ರುವರಿ 2021, 12:15 IST
ಅಕ್ಷರ ಗಾತ್ರ

ಬೀದರ್: ಶರಣರು, ಸಂತರು, ಸಜ್ಜನರ ಸಂಗದಿಂದ ಮನ ಶುದ್ಧಿ ಸಾಧ್ಯವಿದೆ ಎಂದು ಭಾಲ್ಕಿ ಹಿರೇಮಠ ಸಂಸ್ಥಾನದ ಬಸವಲಿಂಗ ಪಟ್ಟದ್ದೇವರು ಹೇಳಿದರು.

ಇಲ್ಲಿಯ ಡಾ. ಚನ್ನಬಸವ ಪಟ್ಟದ್ದೇವರು ಪ್ರಸಾದ ನಿಲಯದಲ್ಲಿ ಆಯೋಜಿಸಿದ್ದ 125ನೇ ತಿಂಗಳ ಅನುಭವ ಮಂಟಪ ಕಾರ್ಯಕ್ರಮದ ಸಾನಿಧ್ಯ ವಹಿಸಿ ಮಾತನಾಡಿದ ಅವರು, ಭಾವ ಶುದ್ಧವಾಗಿದ್ದವರು ದೇವರ ಪ್ರೀತಿಗೆ ಪಾತ್ರರಾಗುತ್ತಾರೆ ಎಂದು ತಿಳಿಸಿದರು.

ಬಸವಾದಿ ಶರಣರ ವಚನ ಸಾಹಿತ್ಯದ ಅಧ್ಯಯನದಿಂದ ಬದುಕು ಹಸನಾಗುತ್ತದೆ ಎಂದು ವಿಶೇಷ ಉಪನ್ಯಾಸ ನೀಡಿದ ಕಲಬುರ್ಗಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸ್ನಾತಕೋತ್ತರ ಕನ್ನಡ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ಮುಖ್ಯಸ್ಥ ಡಾ. ಕಲ್ಯಾಣರಾವ್ ಪಾಟೀಲ ಹೇಳಿದರು.

ಡಾ. ಬಸವಲಿಂಗ ಪಟ್ಟದ್ದೇವರು ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಸವಾದಿ ಶರಣರ ತತ್ವಗಳನ್ನು ಮನೆ ಮನೆಗೆ ತಲುಪಿಸುವ ಕಾರ್ಯ ಮಾಡುತ್ತಿದ್ದಾರೆ ಎಂದು ಉದ್ಘಾಟನೆ ಮಾಡಿದ ಕರ್ನಾಟಕ ರಾಜ್ಯ ಮಹಿಳಾ ಸಹಕಾರ ಮಹಾ ಮಂಡಳದ ಅಧ್ಯಕ್ಷೆ ಶಕುಂತಲಾ ಬೆಲ್ದಾಳೆ ನುಡಿದರು.

ಪ್ರೊ. ಎಸ್.ಬಿ. ಬಿರಾದಾರ ಅಧ್ಯಕ್ಷತೆ ವಹಿಸಿದ್ದರು. ಮಹಾಲಿಂಗ ದೇವರು, ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾಬುವಾಲಿ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷ ವಿಜಯಕುಮಾರ ಆನಂದೆ, ಹಾಸ್ಯ ಕಲಾವಿದ ನವಲಿಂಗ ಪಾಟೀಲ, ಜಿಲ್ಲಾ ಕುಷ್ಠರೋಗ ನಿರ್ಮೂಲನಾ ಅಧಿಕಾರಿ ಡಾ. ಮಹೇಶ ಪಾಟೀಲ, ಜೈಶ್ರೀ ವಿಜಯಕುಮಾರ ಪಾಟೀಲ ಯರನಳ್ಳಿ, ಪ್ರಸಾದ ನಿಲಯದ ವ್ಯವಸ್ಥಾಪಕ ಶ್ರೀಕಾಂತ ಸ್ವಾಮಿ ಉಪಸ್ಥಿತರಿದ್ದರು.

ವಚನಶ್ರೀ ನೌಬಾದೆ ಹಾಗೂ ಚನ್ನಬಸಪ್ಪ ನೌಬಾದೆ ವಚನ ಗಾಯನ ನಡೆಸಿಕೊಟ್ಟರು. ವಿಜಯಕುಮಾರ ಪಾಟೀಲ ಸ್ವಾಗತಿಸಿದರು. ಉಮಾಕಾಂತ ಮೀಸೆ ನಿರೂಪಿಸಿದರು. ಶಿವಕುಮಾರ ಭಾಲ್ಕೆ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT