ಶುಕ್ರವಾರ, ಮೇ 20, 2022
21 °C

ಜಯಂತಿಯಂದು ಅವಮಾನ: ಕ್ರಮಕ್ಕೆ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬಸವಕಲ್ಯಾಣ: ತಾಲ್ಲೂಕಿನ ನಿರ್ಗುಡಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಹೇಮರಡ್ಡಿ ಮಲ್ಲಮ್ಮನವರ ಜಯಂತಿಯ ದಿನಯಂದು ಹಳೆಯದಾಗಿರುವ ಹಾಗೂ ಹಾಳಾದ ಭಾವಚಿತ್ರವಿಟ್ಟು ಪೂಜೆ ಸಲ್ಲಿಸಿ ಅವಮಾನ ಮಾಡಿದವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿ ಗುರುವಾರ ಇಲ್ಲಿನ ಕ್ಷೇತ್ರ ಶಿಕ್ಷಣಾಧಿಕಾರಿ ಚನ್ನಬಸಪ್ಪ ಹಳ್ಳದ್ ಅವರಿಗೆ ತಾಲ್ಲೂಕು ರೆಡ್ಡಿ ಸಮಾಜ ಸಂಘದಿಂದ ಮನವಿಪತ್ರ ಸಲ್ಲಿಸಲಾಯಿತು.

ಮುಖ್ಯಶಿಕ್ಷಕಿ ಮೀನಾ ಕುಮಾರಿ ಯವರು ಉದ್ದೇಶಪೂರ್ವಕವಾಗಿ ಈ ರೀತಿ ಮಾಡಿದ್ದಾರೆ. ಸಂಬಂಧಿಸಿದವರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಲಾಗಿದೆ.

ವಿಜಯಕುಮಾರ ರೆಡ್ಡಿ, ಹೇಮರೆಡ್ಡಿ ಗೌರೆ, ವಕೀಲರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಸಂಜೀವರೆಡ್ಡಿ ಯರಬಾಗ, ಗುರುನಾಥರೆಡ್ಡಿ ಕುದಗೆ, ರಾಜರೆಡ್ಡಿ ನಾರಾಯಣಪುರ, ಅಶೋಕರೆಡ್ಡಿ ಕಿಟ್ಟಾ, ಯಲ್ಲಾರೆಡ್ಡಿ, ಸಾಯಿರೆಡ್ಡಿ, ಆಕಾಶರೆಡ್ಡಿ, ಗೋವಿಂದರೆಡ್ಡಿ, ಪ್ರಹ್ಲಾದರೆಡ್ಡಿ, ಕುಪೇಂದ್ರರೆಡ್ಡಿ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು