ಬೀದರ್: ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕ ಮನೆಯಂಗಳದಲ್ಲಿ ಮಾತು ಕಾರ್ಯಕ್ರಮದ ಮೂಲಕ ಸಾಹಿತಿಗಳು ಹಾಗೂ ವಿವಿಧ ಕ್ಷೇತ್ರಗಳಲ್ಲಿ ಪ್ರತಿಭೆ ಮೆರೆದ ಸಾಧಕರಿಗೆ ಪ್ರೋತ್ಸಾಹ ನೀಡುತ್ತಿರುವುದು ರಾಜ್ಯಕ್ಕೆ ಮಾದರಿಯಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ನಿವೃತ್ತ ಉಪ ನಿರ್ದೇಶಕ ಅಮೃತ ಬೆಟ್ಟದ ಅಭಿಪ್ರಾಯಪಟ್ಟರು.

ನಗರದ ಗೊಂಡ ಬಾಬುರಾವ್ ನಿವಾಸದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಹಾಗೂ ತಾಲ್ಲೂಕು ಘಟಕಗಳ ವತಿಯಿಂದ ಆಯೋಜಿಸಿದ್ದ 54ನೇ ಮನೆಯಂಗಳದಲ್ಲಿ ಮಾತು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿರು.

ಇಂತಹ ಕಾರ್ಯಕ್ರಮಗಳು ನಿರಂತರವಾಗಿ ನಡೆಯಬೇಕು. ಇದರಿಂದ ಸಾಧಕರನ್ನು ಪರಿಚಯಿಸಲು ಸಾಧ್ಯವಾಗುತ್ತದೆ ಎಂದರು.

ಕಲಬುರಗಿಯ ಸಾರ್ವಜನಿಕ ಶಿಕ್ಷಣ ಇಲಾಖೆಯ ನಿವೃತ್ತ ಸಹಾಯಕ ನಿರ್ದೇಶಕ ಗೊಂಡ ಬಾಬುರಾವ್ ಮಾತನಾಡಿ, ಔರಾದ್ ಹಾಗೂ ಬೀದರ್ನಲ್ಲಿ ನನ್ನ ಶಿಕ್ಷಣ ಮುಗಿದಿದೆ. ನಂತರ ಕನ್ನಡ ಜಾಗೃತಿ ಕಾರ್ಯದಲ್ಲಿ ತೊಡಗಿಸಿಕೊಂಡೆ. ಸರ್ಕಾರಿ ಕೆಲಸಕ್ಕೂ ಸೇರಿದರೂ ಕನ್ನಡ ಸೇವೆ ನಿಲ್ಲಿಸಲಿಲ್ಲ ಎಂದರು.

ಕನ್ನಡದ ಸೇವೆಯನ್ನು ಪರಿಗಣಿಸಿ ಅನೇಕ ಸಂಘ ಸಂಸ್ಥೆಗಳು ಪ್ರಶಸ್ತಿ ನೀಡಿ ಗೌರವಿಸಿವೆ. ನಾನು ಹಾಗೂ ನನ್ನ ಪತ್ನಿ ನಂದಾ ಇಬ್ಬರೂ ನೇತ್ರ, ದೇಹದಾನ ಮಾಡಿದ್ದೇವೆ ಎಂದು ತಿಳಿಸಿದರು.

ಕಲಾವಿದ ಶಂಭುಲಿಂಗ ವಾಲ್ದೊಡ್ಡಿ ಮತ್ತು ನಿವೃತ್ತ ಮುಖ್ಯ ಶಿಕ್ಷಕ ರೇವಣಪ್ಪ ಮೂಲಗೆ ಸಂವಾದ ನಡೆಸಿಕೊಟ್ಟರು. ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ ಚನಶೆಟ್ಟಿ ಆಶಯ ನುಡಿ ನುಡಿದರು.

ಮುಖ್ಯ ಅತಿಥಿಯಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯ ನಿವೃತ್ತ ಉಪ ನಿರ್ದೇಶಕ ಪಿ.ಎಸ್.ಇಟಕಂಪಳ್ಳಿ ಮಾತನಾಡಿದರು. ಕನ್ನಡ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಘಟಕದ ಅಧ್ಯಕ್ಷ ಎಂ. ಎಸ್. ಮನೋಹರ ಅಧ್ಯಕ್ಷತೆ ವಹಿಸಿದ್ದರು. ಶಿವಶಂಕರ ಟೋಕರೆ, ಸಾಹಿತಿ ಎಂ. ಜಿ. ಗಂಗನಪಳ್ಳಿ, ಸಂಜೀವಕುಮಾರ ಅತಿವಾಳೆ, ರವೀಂದ್ರ ಲಂಜವಾಡಕರ್, ಸರ್ಕಾರಿ ನೌಕರರ ಸಂಘದ ನಿರ್ದೇಶಕ ಮನೋಹರ ಕಾಶಿ, ರಘುನಾಥ ಮೇತ್ರೆ, ವಿಠಲರಾವ್ ಇದ್ದರು.

ಕಸಾಪ ತಾಲ್ಲೂಕು ಘಟಕದ ಗೌರವ ಕಾರ್ಯದರ್ಶಿ ಶಿವಕುಮಾರ ಚನಶೆಟ್ಟಿ ಸ್ವಾಗತಿಸಿದದರು. ಪ್ರೊ. ಜಗನ್ನಾಥ ಕಮಲಾಪುರೆ ನಿರೂಪಿಸಿದರು. ಟಿ. ಎಂ. ಮಚ್ಛೆ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.