ಬೀದರ್: ಜನವರಿ 16ರಂದು ಚಿಟಗುಪ್ಪ ತಾಲ್ಲೂಕಿನ ತಾಳಮಡಗಿಯಲ್ಲಿ ಬೈಕ್ ಮೇಲೆ ತೆರಳುವಾಗ ವ್ಯಕ್ತಿಯ ಕತ್ತಿಗೆ ಮಾಂಜಾ ಸಿಲುಕಿ ಸಾವನ್ನಪ್ಪಿದ ಪ್ರಕರಣವನ್ನು ಉಪ ಲೋಕಾಯುಕ್ತ ಬಿ. ವೀರಪ್ಪ ಅವರು ಗಂಭೀರವಾಗಿ ಪರಿಗಣಿಸಿದ್ದು, ಉಪವಿಭಾಗಾಧಿಕಾರಿ ಸೇರಿದಂತೆ ಆರು ಜನರ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು ಕಾನೂನು ಕ್ರಮ ಜರುಗಿಸಬೇಕೆಂದು ನಿರ್ದೇಶನ ನೀಡಿದ್ದಾರೆ.

ಬೀದರ್ ಉಪವಿಭಾಗಾಧಿಕಾರಿ ಮುಹಮ್ಮದ್ ಶಕೀಲ್, ಬಸವಕಲ್ಯಾಣ ಉಪವಿಭಾಗಾಧಿಕಾರಿ ಪ್ರಕಾಶ್ ಕುದರಿ, ಚಿಟಗುಪ್ಪ ತಹಶೀಲ್ದಾರ್ ಮಂಜುನಾಥ ಪಂಚಾಳ, ಹುಮನಾಬಾದ್ ಡಿವೈಎಸ್ಪಿ ಮಡೋಳಪ್ಪ, ಚಿಟಗುಪ್ಪ ಪಿಐ ಶ್ರೀನಿವಾಸ್ ಅಲ್ಲಾಪುರ, ಸಬ್ ಇನ್ಸ್ಪೆಕ್ಟರ್ ಮಹೇಂದ್ರಕುಮಾರ್ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಬೇಕು.

ಬೀದರ್ ಜಿಲ್ಲೆಯಾದ್ಯಂತ ಸಂಪೂರ್ಣವಾಗಿ ಮಾಂಜಾ ನಿಷೇಧಿಸಿ, ಅದಕ್ಕೆ ಪೂರಕವಾದ ದಾಖಲೆಗಳೊಂದಿಗೆ ಮಾರ್ಚ್ 3ರಂದು ಖುದ್ದಾಗಿ ಹಾಜರಾಗಿ ಸಲ್ಲಿಸಬೇಕೆಂದು ಸರ್ಕಾರದ ಮುಖ್ಯ ಕಾರ್ಯದರ್ಶಿ, ರಾಜ್ಯ ಪೊಲೀಸ್ ಮಹಾನಿರ್ದೇಶಕರು, ಬೀದರ್ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಸೂಚನೆ ನೀಡಿದ್ದಾರೆ.

ಜನವರಿ 16ರಂದು ‘ಪ್ರಜಾವಾಣಿ’ಯಲ್ಲಿ ‘ಬೀದರ್; ಕತ್ತು ಸೀಳಿದ ಮಾಂಜಾ, ವ್ಯಕ್ತಿ ಸಾವು’ ಶೀರ್ಷಿಕೆಯಡಿ ಪ್ರಕಟಗೊಂಡಿದ್ದ ವರದಿಯನ್ನು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.