ಕಮಲನಗರ (ಬೀದರ್): ಸ್ನೇಹಿತರೊಂದಿಗೆ ಮಾಂಜ್ರಾ ನದಿಯಲ್ಲಿ ಈಜಲು ಹೋದ ಯುವಕನೊಬ್ಬ ಈಜು ಬಾರದೇ ನೀರಿನಲ್ಲಿ ಮುಳುಗಿ ನಾಪತ್ತೆಯಾಗಿರುವ ಘಟನೆ ತಾಲ್ಲೂಕಿನ ಬಳತ (ಬಿ) ಗ್ರಾಮದಲ್ಲಿ ಶನಿವಾರ ನಡೆದಿದೆ.

ಬಳತ (ಬಿ) ಗ್ರಾಮದ ಯುವರಾಜ ಅನೀಲ ಚಿದ್ರೆ (28) ನಾಪತ್ತೆಯಾಗಿರುವ ಯುವಕ. ಶನಿವಾರ ಸ್ನೇಹಿತರೊಂದಿಗೆ ಮಾಂಜ್ರಾ ನದಿಯಲ್ಲಿ ಈಜಲು ತೆರಳಿದ್ದರು. ಯುವರಾಜ ಚಿದ್ರೆ ಅವರಿಗೆ ಈಜು ಬಾರದೇ ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಸುದ್ದಿ ತಿಳಿದು ಸ್ಥಳಕ್ಕೆ ಬಂದ ಅಗ್ನಿಶಾಮಕ, ಪೊಲೀಸ್ ಸಿಬ್ಬಂದಿ, ಈಜು ತಜ್ಞರು ಹಾಗೂ ಗ್ರಾಮಸ್ಥರು ಬೋಟ್ ಮೂಲಕ ಯುವಕನ ಶವ ಹುಡುಕಾಟ ನಡೆಸಿದ್ದಾರೆ. ಘಟನಾ ಸ್ಥಳಕ್ಕೆ ಸಿಪಿಐ ಶ್ರೀಕಾಂತ ಅಲ್ಲಾಪೂರ, ತಹಶೀಲ್ದಾರ ಅಮಿತಕುಮಾರ ಕುಲಕರ್ಣಿ, ಠಾಣಾಕುಶನೂರ ಪಿಎಸ್ಐ ಸೇರಿದಂತೆ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಶೋಧ ಕಾರ್ಯ ಮುಂದುವರೆದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.