ಭಾನುವಾರ, ಮಾರ್ಚ್ 26, 2023
23 °C

ಬೀದರ್‌: ವೇತನ ಪಾವತಿಗೆ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹುಮನಾಬಾದ್: 15 ತಿಂಗಳ ಬಾಕಿ ವೇತನ ಪಾವತಿಸಬೇಕು ಎಂದು ಆಗ್ರಹಿಸಿ ದುಬಲಗುಂಡಿ ಗ್ರಾಮ ಪಂಚಾಯಿತಿ ಪೌರಕಾರ್ಮಿಕರು ಈಚೆಗೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ವೈಜಿನಾಥ ಫುಲೆ ಅವರಿಗೆ ಮನವಿ ಸಲ್ಲಿಸಿದರು.

ಪೌರಕಾರ್ಮಿಕರಾದ ಮವಿತಾ ಸಂಘ ನಾಯಕ ಮಾತನಾಡಿ,‘ಗ್ರಾಮ ಪಂಚಾಯಿತಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಪೌರಕಾರ್ಮಿಕರು ಕಳೆದ 15 ತಿಂಗಳಿಂದ ವೇತನವಿಲ್ಲದೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ’ ಎಂದರು.

ದುಬಲಗುಂಡಿ ಗ್ರಾಮ ಪಂಚಾಯಿತಿಯಲ್ಲಿ ಒಟ್ಟು 13 ಜನ ಪೌರಕಾರ್ಮಿಕರು ಸೇವೆ ಸಲ್ಲಿಸುತ್ತಿದ್ದಾರೆ. ವೇತನವಿಲ್ಲದ ಕಾರಣ ಕುಟುಂಬ ನಿರ್ವಹಣೆ ಕಷ್ಟವಾಗುತ್ತಿದೆ. ಕಿರಾಣಿ ಅಂಗಡಿಗಳಲ್ಲಿ ಮಾಡಿದ ಸಾಲ ತೀರಿಸಲಾಗುತ್ತಿಲ್ಲ. ಊಟಕ್ಕೂ ಪರದಾಡುವಂಥ ಸ್ಥಿತಿ ಎದುರಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ವಿಳಂಬ ನೀತಿ ಅನುಸರಿಸದೆ, ವೇತನ ಪಾವತಿಸಬೇಕು ಎಂದು ಒತ್ತಾಯಿಸಿದರು.

ಉಮರಲಿ, ತುಕಾರಾಮ ಸಂಘನಾಯಕ, ಮಹಾರುದ್ರಪ್ಪ ಚಾಂದೆ, ಶೋಭಾವತಿ ಸಿಂದೆ, ನಾಗಮ್ಮ ಭೋಲಾ, ಮಹಾದೇವಿ ಸಂಘನಾಯಕ, ಖದೀರ್, ಉಮರ ಅಲಿ, ಅಜೀಮೋದ್ದೀನ್, ಪ್ರಕಾಶ ಸಿಂಧನಕೇರಿ, ಸೂರ್ಯಕಾಂತ, ಲಕ್ಷ್ಮೀಕಾಂತ ಝರನಾಯಕ, ಸಂತೋಷ ಲೋಹಾರ ಹಾಗೂ ತುಕರಾಮ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು