ಶನಿವಾರ, 22 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ಮರಾಠಾ ಮೀಸಲಾತಿ ಹೋರಾಟ: ಬಸವಕಲ್ಯಾಣದಲ್ಲಿ ಬಿಗುವಿನ ವಾತಾವರಣ, ಬಸ್ ಸಂಚಾರ ಇಲ್ಲ

Published 31 ಅಕ್ಟೋಬರ್ 2023, 14:36 IST
Last Updated 31 ಅಕ್ಟೋಬರ್ 2023, 14:36 IST
ಅಕ್ಷರ ಗಾತ್ರ

ಬಸವಕಲ್ಯಾಣ: ತಾಲ್ಲೂಕಿನ ಗಡಿಗೆ ಹೊಂದಿಕೊಂಡಿರುವ ಮಹಾರಾಷ್ಟ್ರದಲ್ಲಿ ಮರಾಠಾ ಮೀಸಲಾತಿಗಾಗಿ ನಡೆಯುತ್ತಿರುವ ಹೋರಾಟದಿಂದಾಗಿ ಬಿಗುವಿನ ವಾತಾವರಣ ಇರುವುದರಿಂದ ನಗರದಿಂದ ಅಲ್ಲಿನ ಸ್ಥಳಗಳಿಗೆ ಪ್ರಯಾಣಿಸುವ ಬಸ್‌ಗಳ ಸಂಚಾರ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ಗಡಿಯಲ್ಲಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ತುರೂರಿ ಸಮೀಪ ಸೋಮವಾರ ಕರ್ನಾಟಕದ ಬಸ್‌ಗೆ ಬೆಂಕಿ ಹಚ್ಚಿದ್ದರಿಂದ ಬಸ್ ಸಂಚಾರ ನಿಲ್ಲಿಸಲಾಗಿದೆ. ಮೇಲಾಧಿಕಾರಿಗಳ ಮುಂದಿನ ಆದೇಶದವರೆಗೆ ಬಸ್ ಸಂಚಾರ ಇರುವುದಿಲ್ಲ. ತುಳಜಾಪುರ ಹಾಗೂ ಇತರೆಡೆಯೂ ಹೋಗುವ ಬಸ್ ಗಳು ಹೋಗುವುದಿಲ್ಲ ಎಂದು ಬಸ್ ಘಟಕ ವ್ಯವಸ್ಥಾಪಕರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT