ಬುಧವಾರ, ನವೆಂಬರ್ 25, 2020
24 °C
ಪ್ರವರ್ಗ 2ಎಗೆ ಮರಾಠಾ ಸಮಾಜ

ಪ್ರವರ್ಗ 2ಎಗೆ ಮರಾಠಾ ಸಮಾಜಪ್ರಯತ್ನ ಮುಂದುವರೆಸುವೆ: ಖೂಬಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ಮರಾಠಾ ಸಮಾಜವನ್ನು ಪ್ರವರ್ಗ 2ಎಗೆ ಸೇರಿಸಲು ಪ್ರಯತ್ನ ಮುಂದುವರೆಸಲಾಗುವುದು ಎಂದು ಸಂಸದ ಭಗವಂತ ಖೂಬಾ ತಿಳಿಸಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮರಾಠಾ ಅಭಿವೃದ್ಧಿ ಪ್ರಾಧಿಕಾರ ರಚಿಸಿ ಅದಕ್ಕೆ ₹50 ಕೋಟಿ ಅನುದಾನ ಮೀಸಲಿಟ್ಟಿರುವುದು ಮರಾಠಾ ಸಮಾಜವನ್ನು ಪ್ರವರ್ಗ 2ಎಗೆ ಸೇರ್ಪಡೆ ಮಾಡಲು ತಾವು ನಡೆಸುತ್ತಿರುವ ಪ್ರಯತ್ನಕ್ಕೆ ದೊರೆತ ಮೊದಲ ಯಶಸ್ಸಾಗಿದೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಇರುವ ಕ್ಷತ್ರೀಯ ಮರಾಠಾ ಸಮಾಜದವರು ಆರ್ಥಿಕ ಹಾಗೂ ಶೈಕ್ಷಣಿಕವಾಗಿ ಹಿಂದುಳಿದಿದ್ದು, ಸರ್ಕಾರದ ಯೋಜನೆಗಳ ಪ್ರಯೋಜನ ಪಡೆಯಲು ಅರ್ಹರಾಗಿದ್ದಾರೆ ಎಂದು ತಿಳಿಸಿದ್ದಾರೆ.

2018ರ ವಿಧಾನಸಭೆ ಚುನಾವಣೆ ವೇಳೆ ಮರಾಠಾ ಸಮಾಜವನ್ನು ಪ್ರವರ್ಗ 2ಎಗೆ ಸೇರಿಸಬೇಕು ಎಂದು ಬೀದರ್‌ಗೆ ಭೇಟಿ ನೀಡಿದ್ದ ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದೆ. ಸೆಪ್ಟೆಂಬರ್ 9 ರಂದು ಅವರನ್ನು ಮತ್ತೆ ಭೇಟಿ ಮಾಡಿ ಗಮನ ಸೆಳೆಯಲಾಗಿತ್ತು. ಅದರ ಫಲವಾಗಿ ಅವರು ಮರಾಠಾ ಅಭಿವೃದ್ಧಿ ಪ್ರಾಧಿಕಾರಕ್ಕೆ ₹50 ಕೋಟಿ ಅನುದಾನ ಮೀಸಲಿಟ್ಟಿದ್ದಾರೆ. ಸರ್ಕಾರ ಮರಾಠಾ ಸಮಾಜದ ಅಭಿವೃದ್ಧಿಗೆ ಬದ್ಧವಾಗಿದೆ ಎನ್ನುವುದನ್ನು ತೋರಿಸಿಕೊಟ್ಟಿದ್ದಾರೆ ಎಂದು ಹೇಳಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.