ಬುಧವಾರ, 11 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಏಡ್ಸ್‌ ಜಾಗೃತಿಗೆ ಮ್ಯಾರಥಾನ್‌

Published 23 ಆಗಸ್ಟ್ 2024, 15:50 IST
Last Updated 23 ಆಗಸ್ಟ್ 2024, 15:50 IST
ಅಕ್ಷರ ಗಾತ್ರ

ಬೀದರ್‌: ಎಚ್ಐವಿ ಏಡ್ಸ್ ಕುರಿತು ಜಾಗೃತಿ ಮೂಡಿಸಲು ನಗರದಲ್ಲಿ ಶುಕ್ರವಾರ ಮ್ಯಾರಥಾನ್‌ ಹಮ್ಮಿಕೊಳ್ಳಲಾಗಿತ್ತು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ತಡೆಗಟ್ಟುವ ಘಟಕ ಹಾಗೂ ಬ್ರಿಮ್ಸ್‌ ಸಹಯೋಗದಲ್ಲಿ ಏರ್ಪಡಿಸಿದ್ದ ಮ್ಯಾರಥಾನ್‌ಗೆ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಮಹೇಶ ಬಿರಾದಾರ ಅವರು ನಗರದ ಬರೀದ್‌ ಷಾಹಿ ಉದ್ಯಾನದ ಎದುರು ಚಾಲನೆ ನೀಡಿದರು.

ಜಿಲ್ಲೆಯ ವಿವಿಧ ಕಾಲೇಜಿನ 200ಕ್ಕೂ ಹೆಚ್ಚು ವಿದ್ಯಾರ್ಥಿ/ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು. ಮಡಿವಾಳೇಶ್ವರ ವೃತ್ತ, ಸಿದ್ದಾರ್ಥ ಕಾಲೇಜು, ರಾಜೀವ್‌ ಗಾಂಧಿ ವೃತ್ತ, ಡಾ.ಬಿ.ಆರ್‌.ಅಂಬೇಡ್ಕರ್‌ ವೃತ್ತದ ಮೂಲಕ ಸಾಗಿ ಹರಳಯ್ಯ ವೃತ್ತದ ಮೂಲಕ ಡಿಎಚ್‌ಒ ಕಚೇರಿ ಎದುರು ಕೊನೆಗೊಂಡಿತು. 

ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ.ದಿಲೀಪ್‌ ಡೋಂಗ್ರೆ, ಜಿಲ್ಲಾ ಮಲೇರಿಯಾ ಅಧಿಕಾರಿ ಡಾ.ರಾಜಶೇಖರ ಪಾಟೀಲ, ಜಿಲ್ಲಾ ಕುಷ್ಠರೋಗ ಅಧಿಕಾರಿ ಡಾ.ಕಿರಣ ಪಾಟೀಲ, ಜಿಲ್ಲಾ ಸರ್ವೇಕ್ಷಾಣಾಧಿಕಾರಿ ಡಾ.ಶಂಕ್ರೆಪ್ಪ ಬೊಮ್ಮಾ, ಜಿಲ್ಲಾ ಆರ್.ಸಿ.ಎಚ್ ಅಧಿಕಾರಿ ಡಾ.ಶಿವಶಂಕರ ಬಿ., ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅಧ್ಯಾಪಕ ಸಂಜುಕುಮಾರ ಅಪ್ಪೆ, ಸಿದ್ದಾರ್ಥ ಕಾಲೇಜಿನ ಪ್ರಾಂಶುಪಾಲ ರವೀಂದ್ರ ಬಿ.ಖೊಬಾ, ಅಥ್ಲೆಟಿಕ್‌ ತರಬೇತುದಾರ ನೂರ್‌ ಅಲೀಂ ಹಾಗೂ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಕಾಂಬ್ಳೆ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT