ಮಂಗಳವಾರ, ಜನವರಿ 18, 2022
27 °C

ಆಶಾರಾಣಿ ವಿಲಿಯಂ ಮೇತ್ರೆ ಅವರ ‘ಮರೀಚಿಕೆ’ ಕೃತಿ ಬಿಡುಗಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ಕನ್ನಡ ಪುಸ್ತಕ ಪ್ರಾಧಿಕಾರಕ್ಕೆ ಆಯ್ಕೆಯಾದ ಜಿಲ್ಲೆಯ ಚಿಟಗುಪ್ಪ ತಾಲ್ಲೂಕಿನ ಚಾಂಗಲೇರಾ ಗ್ರಾಮದ ಲೇಖಕಿ ಆಶಾರಾಣಿ ವಿಲಿಯಂ ಮೇತ್ರೆ ಅವರ ‘ಮರೀಚಿಕೆ’ ಕೃತಿಯನ್ನು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ.ಹಂಪ ನಾಗರಾಜಯ್ಯ ಬೆಂಗಳೂರಿನಲ್ಲಿ ಬಿಡುಗಡೆ ಮಾಡಿದರು.

ಸಾಮಾಜಿಕ ವ್ಯವಸ್ಥೆ ಮೇಲೆ ಬೆಳಕು ಚೆಲ್ಲುವ 62 ಗಜಲ್‍ಗಳನ್ನು ಒಳಗೊಂಡ 72 ಪುಟಗಳ ‘ಮರೀಚಿಕೆ’ಯು ಆಶಾರಾಣಿ ಅವರ ಚೊಚ್ಚಲ ಕೃತಿಯಾಗಿದೆ. ಆಶಾರಾಣಿ, ಉಡಮನಳ್ಳಿ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿಯಾಗಿದ್ದಾರೆ.

ಸಮಾರಂಭದಲ್ಲಿ ಸಾಹಿತಿ ಜಯಂತ ಕಾಯ್ಕಿಣಿ, ಡಾ.ಎಂ.ಎಸ್. ನಂದಿ ಹಂಚೆ, ಕನ್ನಡ ಪುಸ್ತಕ ಪ್ರಾಧಿಕಾರದ ಕೆ.ಬಿ. ಕಿರಣ ಸಿಂಗ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ನಿರ್ದೇಶಕ ಎಸ್. ರಂಗಪ್ಪ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು