ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೀದರ್‌: ಈರುಳ್ಳಿ ಬೆಲೆ ಇಳಿಮುಖ

ಮಾರುಕಟ್ಟೆಯಲ್ಲಿ ಕಡಿಮೆಯಾದ ಸೊಪ್ಪಿನ ಬೆಲೆ
Last Updated 19 ಜನವರಿ 2020, 10:46 IST
ಅಕ್ಷರ ಗಾತ್ರ

ಬೀದರ್‌: ಇಲ್ಲಿಯ ತರಕಾರಿ ಸಗಟು ಮಾರುಕಟ್ಟೆಯಲ್ಲಿ ಈರುಳ್ಳಿ ಬೆಲೆ ಕಡಿಮೆಯಾಗಿದೆ. ಕಳೆದ ವಾರ ಪ್ರತಿ ಕೆಜಿಗೆ ₹ 60 ಇದ್ದ ಈರುಳ್ಳಿ ಇದೀಗ ₹ 50ಕ್ಕೆ ಮಾರಾಟವಾಗುತ್ತಿದೆ. ಬೆಳ್ಳುಳ್ಳಿ ಬೆಲೆ ಮಾತ್ರ ಎರಡು ವಾರಗಳಿಂದ ಸ್ಥಿರವಾಗಿಯೇ ಇದೆ.

ವಿದೇಶದಿಂದ ದೇಶದ ಮಾರುಕಟ್ಟೆಗೆ ಈರುಳ್ಳಿ ಪ್ರವೇಶಿಸಿದ ನಂತರ ಸಹಜವಾಗಿಯೇ ಬೆಲೆ ಇಳಿಮುಖವಾಗಿದೆ. ಬೆಲೆ ಹೆಚ್ಚಳದ ಸಂದರ್ಭದಲ್ಲಿ ದಾಸ್ತಾನು ಮಾಡಿಕೊಂಡಿದ್ದ ಈರುಳ್ಳಿಯನ್ನು ವ್ಯಾಪಾರಿಗಳು ಮತ್ತೆ ಮಾರುಕಟ್ಟೆಗೆ ತಂದಿದ್ದಾರೆ. ಹೀಗಾಗಿ ಹೊಸ ಈರುಳ್ಳಿ ಬೆಲೆ ಪ್ರತಿ ಕ್ವಿಂಟಲ್‌ಗೆ ಒಂದು ಸಾವಿರ ರೂಪಾಯಿ ಕಡಿಮೆಯಾಗಿದೆ.

ಹೊಸ ಬೆಳ್ಳುಳ್ಳಿ ಮಾರುಕಟ್ಟೆಗೆ ಬರುತ್ತಿಲ್ಲ. ಹೀಗಾಗಿ ಎರಡು ವಾರಗಳಿಂದ ಬೆಲೆ ಸ್ಥಿರವಾಗಿದೆ. 15 ದಿನಗಳ ಮೊದಲು ಬೆಳ್ಳುಳ್ಳಿ ಪ್ರತಿ ಕೆ.ಜಿಗೆ ₹ 200 ರಂತೆ ಮಾರಾಟವಾಗಿತ್ತು. ಈಗ ಬೆಲೆ ಪ್ರತಿ ಕೆ.ಜಿಗೆ ₹ 20 ಕಡಿಮೆಯಾಗಿದೆ. ನೀರಾವರಿ ಪ್ರದೇಶದಲ್ಲಿ ಬೆಳೆದ ಬೆಳ್ಳುಳ್ಳಿ ಮಾರುಕಟ್ಟೆಗೆ ಬರುತ್ತಿದೆ.

ಮಾರುಕಟ್ಟೆಯಲ್ಲಿ ಈ ವಾರ ಮತ್ತೆ ಮೆಂತೆ ಸೊಪ್ಪು, ಕೊತಂಬರಿ ಹಾಗೂ ಕರಿಬೇವಿನ ಬೆಲೆಯಲ್ಲಿ ಪ್ರತಿ ಕ್ವಿಂಟಲ್‌ಗೆ ಒಂದು ಸಾವಿರ ರೂಪಾಯಿ ಹೆಚ್ಚಳವಾಗಿದೆ. ಆಲೂಗಡ್ಡೆ ಹಾಗೂ ಗಜ್ಜರಿ ಬೆಲೆ ಪ್ರತಿ ಕ್ವಿಂಟಲ್‌ಗೆ ಒಂದು ಸಾವಿರ ರೂಪಾಯಿ ಏರಿಕೆಯಾಗಿದೆ.

ನುಗ್ಗೆಕಾಯಿ, ಬೆಂಡೆಕಾಯಿ, ಹಿರೇಕಾಯಿ, ಬದನೆಕಾಯಿ, ಟೊಮೆಟೊ, ತೊಂಡೆಕಾಯಿ, ಬೀಟ್‌ರೂಟ್ ಹಾಗೂ ಎಲೆಕೋಸಿನ ಬೆಲೆ ಸ್ಥಿರವಾಗಿದೆ. ಇನ್ನೂ ಎರಡು ವಾರ ತರಕಾರಿ ಬೆಲೆ ಯಥಾಸ್ಥಿತಿಯಲ್ಲಿ ಇರುವ ಸಾಧ್ಯತೆ ಇದೆ ಎಂದು ಮಾರುಕಟ್ಟೆ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
ನಗರದ ಮಾರುಕಟ್ಟೆಗೆ ಮಹಾರಾಷ್ಟ್ರದ ಸೋಲಾಪುರದಿಂದ ಈರುಳ್ಳಿ ಹಾಗೂ ಬೆಳ್ಳುಳ್ಳಿ ಆವಕವಾಗಿದೆ. ಆಗ್ರಾದಿಂದ ಆಲೂಗಡ್ಡೆ ಬಂದಿದೆ. ಹೈದರಾಬಾದ್‌ನಿಂದ ಮೆಣಸಿನಕಾಯಿ, ಬೀನ್ಸ್, ಗಜ್ಜರಿ, ಎಲೆಕೋಸು, ಹೂಕೋಸು, ತೊಂಡೆಕಾಯಿ ಬಂದಿದೆ.

‘ಸೊಪ್ಪಿಗೆ ಬೇಡಿಕೆ ಇದ್ದರೂ ನಿರೀಕ್ಷೆಯಷ್ಟು ಸೊಪ್ಪು ಬೀದರ್‌ ಮಾರುಕಟ್ಟೆಗೆ ಬರುತ್ತಿಲ್ಲ. ಬಹುತೇಕ ಪುರುಷರು ಹಬ್ಬದ ಸಂದರ್ಭದಲ್ಲಿ ಬಾಡೂಟಕ್ಕೆ ಒತ್ತು ಕೊಟ್ಟಿದ್ದರಿಂದ ಮಕರ ಸಂಕ್ರಮಣದ ಸಂದರ್ಭದಲ್ಲೂ ಹೆಚ್ಚು ತರಕಾರಿ ಮಾರಾಟವಾಗಿಲ್ಲ’ ಎಂದು ಗಾಂಧಿಗಂಜ್ ತರಕಾರಿ ಸಗಟು ವ್ಯಾಪಾರಿ ವಿಜಯಕುಮಾರ ಕಡ್ಡೆ ಹೇಳುತ್ತಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT