ಶುಕ್ರವಾರ, ಜುಲೈ 23, 2021
23 °C

21 ರಂದು ಸಾಮೂಹಿಕ ಯೋಗಾಭ್ಯಾಸ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ಅಂತರರಾಷ್ಟ್ರೀಯ ಯೋಗ ದಿನಾಚರಣೆ ನಿಮಿತ್ತ ಕೇಂದ್ರ ಸರ್ಕಾರದ ಆಯುಷ್ ಇಲಾಖೆ, ಸೂರ್ಯ ಫೌಂಡೇಷನ್ ಹಾಗೂ ಇಂಟರ್‍ನ್ಯಾಷನಲ್ ನ್ಯಾಚರೋಪತಿ ಆರ್ಗನೈಸೇಷನ್ ವತಿಯಿಂದ ಜೂನ್ 21 ರಂದು ಬೆಳಿಗ್ಗೆ 7 ರಿಂದ 8 ರ ವರೆಗೆ ಆನ್‍ಲೈನ್‍ನಲ್ಲಿ ಸಾಮೂಹಿಕ ಯೋಗಾಭ್ಯಾಸ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಕೋವಿಡ್ ಕಾರಣ ಸಾರ್ವಜನಿಕ ಸಭೆ, ಸಮಾರಂಭ ಹಾಗೂ ಇತರ ಕಾರ್ಯಕ್ರಮಗಳನ್ನು ನಿಷೇಧಿಸಿರುವುದರಿಂದ ಇಂಟರ್‍ನ್ಯಾಷನಲ್ ನ್ಯಾಚರೋಪತಿ ಆರ್ಗನೈಸೇಷನ್ ರಾಷ್ಟ್ರೀಯ ಅಧ್ಯಕ್ಷ ಅನಂತ ಬಿರಾದಾರ ಅವರ ಮಾರ್ಗದರ್ಶನದಲ್ಲಿ ದೇಶದಾದ್ಯಂತ ಆನ್‍ಲೈನ್‍ನಲ್ಲಿ ಸರಳವಾಗಿ ಕಾರ್ಯಕ್ರಮ ಜರುಗಲಿದೆ ಎಂದು ಸೂರ್ಯ ಫೌಂಡೇಷನ್ ಜಿಲ್ಲಾ ಸಂಚಾಲಕ ಗುರುನಾಥ ರಾಜಗೀರಾ ತಿಳಿಸಿದ್ದಾರೆ.

ಬೀದರ್ ಜಿಲ್ಲೆಯಲ್ಲಿ ಒಂದು ಸಾವಿರ ಕುಟುಂಬಗಳ ಸುಮಾರು 5 ಸಾವಿರ ಜನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮಕ್ಕೆ ಹೆಸರು ನೋಂದಾಯಿಸಿಕೊಂಡವರಿಗೆ ಜೂನ್ 20 ರ ವರೆಗೆ ಪ್ರತಿ ದಿನ ಬೆಳಿಗ್ಗೆ ಆನ್‍ಲೈನ್ ಮೂಲಕ ತರಬೇತಿ ನೀಡಲಾಗುವುದು ಎಂದು ಹೇಳಿದ್ದಾರೆ.

ಫೌಂಡೇಷನ್ ಫೇಸ್ ಬುಕ್ ಪುಟ suryafoundation1, surya adarsh gaon yojna ಮೂಲಕ ಪ್ರತಿ ದಿನ ಯೋಗ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಬಹುದು. ಜೂನ್ 21 ರಂದು ನಡೆಯುವ ಸಾಮೂಹಿಕ ಯೋಗಾಭ್ಯಾಸದಲ್ಲೂ ಪಾಲ್ಗೊಳ್ಳಬಹುದು ಎಂದು ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು