ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾಧ್ಯಮಕ್ಕಿದೆ ಸಮಸ್ಯೆ ಪರಿಹರಿಸುವ ಸಾಮರ್ಥ್ಯ

ವಿಧಾನ ಪರಿಷತ್ ಸದಸ್ಯ ವಿಜಯಸಿಂಗ್ ಅಭಿಮತ
Last Updated 15 ಜುಲೈ 2021, 13:14 IST
ಅಕ್ಷರ ಗಾತ್ರ

ಬೀದರ್‌: ‘ಮಾದ್ಯಮ ಇಂದು ಸರ್ಕಾರ ಹಾಗೂ ಜನರ ನಡುವಿನ ಸೇತುವೆಯಾಗಿ ಕಾರ್ಯನಿರ್ವಹಿಸುತ್ತಿದೆ. ಜಟಿಲವಾದ ಸಮಸ್ಯೆಗಳಿಗೂ ಪರಿಹಾರ ಕಂಡುಕೊಳ್ಳುವ ಸಾಮರ್ಥ್ಯ ಮಾಧ್ಯಮಗಳಿಗೆ ಇದೆ’ ಎಂದು ವಿಧಾನ ಪರಿಷತ್ ಸದಸ್ಯ ವಿಜಯಸಿಂಗ್ ಅಭಿಪ್ರಾಯಪಟ್ಟರು.

ಇಲ್ಲಿಯ ಕರ್ನಾಟಕ ಸಾಹಿತ್ಯ ಸಂಘದ ಭವನದಲ್ಲಿ ಕಲ್ಯಾಣ ಕರ್ನಾಟಕ ಮುದ್ರಣ ಮತ್ತು ವಿದ್ಯುನ್ಮಾನ ಮಾಧ್ಯಮ ಸಂಘದ ವತಿಯಿಂದ ಏರ್ಪಡಿಸಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

‘ನಾಗರಿಕ ಸಮಸ್ಯೆಗಳನ್ನು ಸ್ಥಳೀಯ ಆಡಳಿತದ ಗಮನಕ್ಕೆ ತಂದು ಅಧಿಕಾರಿಗಳನ್ನು ಎಚ್ಚರಿಸುವ ಕೆಲಸವನ್ನೂ ಮಾಧ್ಯಮ ಮಾಡುತ್ತಿದೆ’ ಎಂದು ತಿಳಿಸಿದರು.

ಡೆನ್ ನೆಟ್‌ವರ್ಕ್‌ನ ಮಾಲೀಕ ರವಿ ಸ್ವಾಮಿ ಮಾತನಾಡಿದರು. ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ ಚನಶೆಟ್ಟಿ ಹಾಗೂ ಪತ್ರಕರ್ತ ದೇವೇಂದ್ರ ಸೋನಿ ಮಾತನಾಡಿದರು.

ಮಹ್ಮದ್ ವಜಹತ್ ಅಲಿಖಾನ್, ಅಬ್ದುಲ್ ಮತೀನ್, ಅಮ್ಜದ್ ಪಾಶಾ, ಮಹ್ಮದ್ ನವಾಜ್, ಆನಂದ, ಸೈಯದ್ ಮುಜಿಬ್ ಅಹ್ಮದ್, ಬಸಯ್ಯಾ ಸ್ವಾಮಿ, ಮಹ್ಮದ್ ಸಲಿಮೋದ್ದೀನ್ ಇದ್ದರು. ಪ್ರರ್ತಕರ್ತ ಸ್ವಾಮಿದಾಸ ನಾಗೂರೆ ಅಧ್ಯಕ್ಷತೆ ವಹಿಸಿದ್ದರು. ಸುಸ್ಮಿತಾ ಮೋರೆ ಸ್ವಾಗತಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT