ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೀದರ್: ಗ್ರಾ.ಪಂಗೆ ವೈದ್ಯಕೀಯ ಉಪಕರಣ ಕೊಡುಗೆ

Last Updated 12 ಜೂನ್ 2021, 15:02 IST
ಅಕ್ಷರ ಗಾತ್ರ

ಜನವಾಡ: ರೋಟರಿ ಕ್ಲಬ್ ಆಫ್ ಬೀದರ್ ನ್ಯೂ ಸೆಂಚುರಿಯು ಬೀದರ್ ತಾಲ್ಲೂಕಿನ ಜನವಾಡ ಗ್ರಾಮ ಪಂಚಾಯಿತಿಗೆ ವೈದ್ಯಕೀಯ ಉಪಕರಣಗಳನ್ನು ಕೊಡುಗೆಯಾಗಿ ನೀಡಿದೆ.

ಕ್ಲಬ್ ಪದಾಧಿಕಾರಿಗಳು ಗ್ರಾಮ ಪಂಚಾಯಿತಿ ಅಧ್ಯಕ್ಷ ರಮೇಶ ಮೇತ್ರೆ ಅವರಿಗೆ ಪಲ್ಸ್ ಆಕ್ಸಿಮೀಟರ್ ಹಾಗೂ ಇನ್‍ಫ್ರಾರೆಡ್ ಥರ್ಮೋ ಮೀಟರ್‍ಗಳನ್ನು ಹಸ್ತಾಂತರಿಸಿದರು.

ಅಲೆಮಾರಿಗಳು, ಬಡವರು ಹಾಗೂ ಸಾರ್ವಜನಿಕರಿಗೆ ಸ್ಯಾನಿಟೈಸರ್ ಹಾಗೂ ಮಾಸ್ಕ್‍ಗಳನ್ನು ಉಚಿತವಾಗಿ ವಿತರಿಸಿದರು. ಕೋವಿಡ್ ಸೋಂಕಿನಿಂದ ರಕ್ಷಣೆ ಒದಗಿಸುವ ಲಸಿಕೆ ಕುರಿತು ಜಾಗೃತಿ ಸಹ ಮೂಡಿಸಿದರು.

ಕೋವಿಡ್‍ಗೆ ಸಂಬಂಧಿಸಿದ ಪರೀಕ್ಷೆಗಳಿಗಾಗಿ ಗ್ರಾಮ ಪಂಚಾಯಿತಿಗೆ ಪಲ್ಸ್ ಆಕ್ಸಿಮೀಟರ್ ಹಾಗೂ ಇನ್‍ಫ್ರಾರೆಡ್ ಥರ್ಮೋ ಮೀಟರ್‌ಗಳನ್ನು ದೇಣಿಗೆ ರೂಪದಲ್ಲಿ ಕೊಡಲಾಗಿದೆ ಎಂದು ಕ್ಲಬ್ ಅಧ್ಯಕ್ಷ ಸೂರ್ಯಕಾಂತ ರಾಮಶೆಟ್ಟಿ ತಿಳಿಸಿದರು.

ಅರ್ಹ ಪ್ರತಿಯೊಬ್ಬರೂ ಸ್ವಯಂ ಪ್ರೇರಣೆಯಿಂದ ಕೋವಿಡ್ ಲಸಿಕೆ ಪಡೆಯಬೇಕು. ಈ ಮೂಲಕ ಕೋವಿಡ್ ನಿಯಂತ್ರಣಕ್ಕೆ ಆಡಳಿತದೊಂದಿಗೆ ಕೈಜೋಡಿಸಬೇಕು ಎಂದು ಹೇಳಿದರು.

ಕೋವಿಡ್ ಸೋಂಕು ಬರದಂತೆ ತಡೆಯಲು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಸ್ಯಾನಿಟೈಸರ್ ಬಳಸಬೇಕು. ಸಾಮಾಜಿಕ ಅಂತರ ಕಾಪಾಡಬೇಕು ಎಂದು ಮನವಿ ಮಾಡಿದರು.

ಕ್ಲಬ್ ಉಪಾಧ್ಯಕ್ಷ ನಿತಿನ್ ಕರ್ಪೂರ, ಸದಸ್ಯ ಸಚ್ಚಿದಾನಂದ ಚಿದ್ರೆ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಪ್ರೀತಿ ದಾದಾರಾವ್, ಅಭಿವೃದ್ಧಿ ಅಧಿಕಾರಿ ಗೀತಾ ರೆಡ್ಡಿ, ಸದಸ್ಯರಾದ ಮುಕೇಶ, ಲತಿಫ್, ಸಂತೋಷ ಹಾಗೂ ಸಿಬ್ಬಂದಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT