ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೈದ್ಯಕೀಯ ಶುಲ್ಕ ಹೆಚ್ಚಳಕ್ಕೆ ಎಬಿವಿಪಿ ವಿರೋಧ

Last Updated 25 ಜೂನ್ 2019, 14:14 IST
ಅಕ್ಷರ ಗಾತ್ರ

ಬೀದರ್: ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಕೋರ್ಸ್‌ಗಳ ಶುಲ್ಕ ಹೆಚ್ಚಳ ಮಾಡಿರುವ ರಾಜ್ಯ ಸರ್ಕಾರದ ಕ್ರಮಕ್ಕೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಜಿಲ್ಲಾ ಘಟಕ ತೀವ್ರ ವಿರೋಧ ವ್ಯಕ್ತಪಡಿಸಿದೆ.

ಜಿಲ್ಲಾ ಘಟಕದ ಪದಾಧಿಕಾರಿಗಳು ನಗರದಲ್ಲಿ ಮಂಗಳವಾರ ನಿಯೋಗದಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮುಖ್ಯಮಂತ್ರಿಗೆ ಬರೆದ ಮನವಿ ಪತ್ರವನ್ನು ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗೆ ಸಲ್ಲಿಸಿದರು.

2019-20ನೇ ಶೈಕ್ಷಣಿಕ ವರ್ಷದಲ್ಲಿ ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಶುಲ್ಕದಲ್ಲಿ ಶೇ 15 ರಷ್ಟು ಹೆಚ್ಚಳ ಮಾಡಿದ್ದು, ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹೊರೆಯಾಗಲಿದೆ ಎಂದು ದೂರಿದರು.

ಶುಲ್ಕ ಹೆಚ್ಚಳ ಕೈಬಿಡಬೇಕು. ಕಳೆದ ವರ್ಷ ಹೆಚ್ಚಿಸಲಾದ ಶುಲ್ಕ ಕಡಿಮೆ ಮಾಡಬೇಕು. ಕೇಂದ್ರ ಸರ್ಕಾರ ಆರ್ಥಿಕವಾಗಿ ಹಿಂದುಳಿದ ವರ್ಗದವರಿಗೆ ಒದಗಿಸಿರುವ ಶೇ 10 ರಷ್ಟು ಮಿಸಲಾತಿಯನ್ನು ರಾಜ್ಯದಲ್ಲೂ ಜಾರಿಗೆ ತರಬೇಕು ಎಂದು ಆಗ್ರಹಿಸಿದರು.

ಪರಿಷತ್ ರಾಜ್ಯ ಘಟಕದ ಸಹ ಕಾರ್ಯದರ್ಶಿ ರೇವಣಸಿದ್ದ ಜಾಡರ್, ಸಂಘಟನಾ ಕಾರ್ಯದರ್ಶಿ ಧನಂಜಯ ಚಿತ್ರದುರ್ಗ, ನಗರ ಘಟಕದ ಉಪಾಧ್ಯಕ್ಷ ಬಸವರಾಜ ಬಿರಾದಾರ, ಮುಖಂಡರಾದ ಅರವಿಂದ ಸುಂದಾಳಕರ್, ಅರ್ಜುನ ಬೀರಗೆ, ಇಂದುಮತಿ, ಸಂತೋಷ ನಿಯೋಗದಲ್ಲಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT