ಸೋಮವಾರ, ಜೂನ್ 21, 2021
21 °C

ಉದ್ಯಾನದಲ್ಲಿ ಮಳಿಗೆ ನಿರ್ಮಾಣಕ್ಕೆ ವಿರೋಧ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬಸವಕಲ್ಯಾಣ: ಇಲ್ಲಿನ ಐತಿಹಾಸಿಕ ಬಸವ ವನ ಉದ್ಯಾನದಲ್ಲಿ ಮಳಿಗೆ ನಿರ್ಮಾಣಕ್ಕಾಗಿ ಪ್ರಯತ್ನಿಸಲಾಗುತ್ತಿದ್ದು, ಅದನ್ನು ವಿರೋಧಿಸುತ್ತೇನೆ ಎಂದು ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ ಹೇಳಿದ್ದಾರೆ.

ಉದ್ಯಾನದ ಸಮಗ್ರ ಅಭಿವೃದ್ಧಿ ಕೈಗೊಳ್ಳಬೇಕು. ಇಲ್ಲಿ ಕಸಕಡ್ಡಿ ಬೀಳದಂತೆ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಯಾರೂ ಇಲ್ಲಿ ಮೂತ್ರ ವಿಸರ್ಜಿಸದಂತೆ ಕ್ರಮ ತೆಗೆದುಕೊಳ್ಳಬೇಕು. ಬೇಸಿಗೆಯಲ್ಲಿ ಇಲ್ಲಿ ಬಂದು ಆಸೀನರಾಗಲು ಉತ್ತಮ ನೆರಳು ದೊರಕುವಂತೆ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು. ತಾವು ಅಲ್ಲಿಗೆ ಹೋಗಿ ಪರಿಶೀಲಿಸಿದ್ದು ಕೆಲವರು ಆವರಣಕ್ಕೆ ಹತ್ತಿಕೊಂಡು ಶೆಡ್ ನಿರ್ಮಿಸಿದ್ದು ಅದನ್ನು ತೆರವುಗೊಳಿಸಬೇಕೆಂದು ಸಂಬಂಧಿತರಿಗೆ ಸೂಚಿಸಿದ್ದೇನೆ ಎಂದಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.