ಭಾನುವಾರ, ಸೆಪ್ಟೆಂಬರ್ 27, 2020
26 °C
ಜಿಲ್ಲೆಯ ವಿವಿಧೆಡೆ ಭಾವಚಿತ್ರಕ್ಕೆ ಪೂಜೆ

ಬೀದರ್: ‘ಕ್ವಿಟ್‌ ಇಂಡಿಯಾ’ಗೆ 79 ವರ್ಷ, ಸ್ವಾತಂತ್ರ್ಯ ಹೋರಾಟಗಾರರ ಕೊಡುಗೆ ಸ್ಮರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ‘ಬ್ರಿಟಿಷರೇ ಭಾರತ ಬಿಟ್ಟು ತೊಲಗಿ’ ಚಳವಳಿ ನಡೆದು 79 ವರ್ಷಗಳಾದ ಪ್ರಯುಕ್ತ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಪಕ್ಷದ ಕಚೇರಿಯಲ್ಲಿ ಭಾನುವಾರ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಪಕ್ಷದ ಮುಖಂಡರು ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.

‘1942ರಲ್ಲಿ ನಡೆದ ಕಾಂಗ್ರೆಸ್ ಆಧಿವೇಶನದಲ್ಲಿ ನಿರ್ಣಯ ಕೈಗೊಂಡು ಮುಂಬೈನಲ್ಲಿ ಬೃಹತ್‌ ಪ್ರತಿಭಟನೆ ಮಾಡಲಾಗಿತ್ತು. ಅಂದು ಹಿಂದೂ ಮಹಾಸಭಾದ ಸಾವರಕರ್‌ ಸೇರಿದಂತೆ ಕೆಲ ಸಂಘಟನೆಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದವು’ ಎಂದು ಕಾಂಗ್ರೆಸ್‌ ಮುಖಂಡ ಶಂಕರ ದೊಡ್ಡಿ ಹೇಳಿದರು.

ಕಾಂಗ್ರೆಸ್ ಹಿಂದುಳಿದ ವಿಭಾಗದ ಅಧ್ಯಕ್ಷ ಶಂಕರ ರೆಡ್ಡಿ, ಪರಿಶಿಷ್ಟ ವಿಭಾಗದ ಡಿ.ಕೆ.ಸಂಜು, ಜಿಲ್ಲಾ ಕಾರ್ಯದರ್ಶಿ ಜಾರ್ಜ್, ಬುಡಾ ಮಾಜಿ ಅಧ್ಯಕ್ಷ ಸಂಜಯ್ ಜಾಗೀರದಾರ್, ಗೋವರ್ಧನ ರಾಥೋಡ್, ಮೋಹನ ಡಾಂಗೆ ಮತ್ತು ಗೌತಮ ಕಂದಗೂಳ ಇದ್ದರು.

ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಆನಂದ ದೇವಪ್ಪ ಸ್ವಾಗತಿಸಿ ವಂದಿಸಿದರು

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು