ಬೀದರ್: ನಿಯಮಿತ ಯೋಗದಿಂದ ಮಾನಸಿಕ ಒತ್ತಡ ಹಾಗೂ ಖಿನ್ನತೆಯಿಂದ ಹೊರ ಬರಲು ಸಾಧ್ಯವಿದೆ ಎಂದು ನೆಹರೂ ಯುವ ಕೇಂದ್ರದ ಜಿಲ್ಲಾ ಯುವ ಅಧಿಕಾರಿ ಮಯೂರಕುಮಾರ ಗೋರಮೆ ಸಲಹೆ ಮಾಡಿದರು.

ನೆಹರೂ ಯುವ ಕೇಂದ್ರವು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮತ್ತು ಗುರುದ್ವಾರ ಪ್ರಬಂಧಕ ಕಮಿಟಿ ಸಹಯೋಗದಲ್ಲಿ ಇಲ್ಲಿಯ ಗುರುದ್ವಾರ ಆವರಣದಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಯೋಗವು ಮನುಷ್ಯನ ದೈಹಿಕ ಹಾಗೂ ಮಾನಸಿಕ ಆರೋಗ್ಯ ಸದೃಢಗೊಳಿಸುತ್ತದೆ. ದೇಹಕ್ಕೆ ಕೋವಿಡ್ ಹಾಗೂ ಇತರ ರೋಗಗಳ ವಿರುದ್ಧ ಹೋರಾಡುವ ಶಕ್ತಿ ನೀಡುತ್ತದೆ ಎಂದು ತಿಳಿಸಿದರು.

ವಿಶ್ವಕ್ಕೆ ಯೋಗ ಕೊಡುಗೆ ನೀಡಿದ ಹಿರಿಮೆ ಭಾರತದ್ದಾಗಿದೆ. ಇಂದು ಅನೇಕ ದೇಶಗಳು ಯೋಗ ಅಳವಡಿಸಿಕೊಂಡಿವೆ. ಆದರೆ, ಭಾರತೀಯರೇ ಯೋಗದಿಂದ ದೂರ ಸರಿಯುತ್ತಿರುವುದು ಕಳವಳಕಾರಿಯಾಗಿದೆ ಎಂದು ನುಡಿದರು.

ಯುವಕರು ಉತ್ತಮ ಆರೋಗ್ಯಕ್ಕೆ ಸಹಕಾರಿಯಾದ ಯೋಗ, ಧ್ಯಾನ ಮೊದಲಾದ ಚಟುವಟಿಕೆಗಳನ್ನು ತಮ್ಮ ದೈನಂದಿನ ಜೀವನದ ಭಾಗವಾಗಿಸಿಕೊಳ್ಳಬೇಕು ಎಂದು ಸಲಹೆ ಮಾಡಿದರು.

ಭಾರತೀಯ ಪರಂಪರೆಯಲ್ಲಿ ಯೋಗಕ್ಕೆ ಬಹಳ ಮಹತ್ವ ಇದೆ. ಆರೋಗ್ಯಕರ ಜೀವನಕ್ಕಾಗಿ ನಿತ್ಯ ಯೋಗ ಮಾಡಬೇಕು ಎಂದು ರಾಜ್ಯ ಯುವ ಪ್ರಶಸ್ತಿ ಪುರಸ್ಕೃತ ಶಿವಕುಮಾರ ಸ್ವಾಮಿ ಹೇಳಿದರು.

ಪತಂಜಲಿ ಯೋಗ ಸಮಿತಿಯ ಯೋಗ ಗುರು ಗೋರಕನಾಥ ಕುಂಬಾರ ಒಂದು ಗಂಟೆ ಕಾರ್ಯಕ್ರಮದಲ್ಲಿ ಪಾಲ್ಗೊಂಡವರಿಗೆ ಯೋಗದ ವಿವಿಧ ಪ್ರಕಾರಗಳನ್ನು ಹೇಳಿಕೊಟ್ಟರು.

ಗುರುನಾನಕ ಐಟಿಐ ಪ್ರಾಚಾರ್ಯ ಗುರುಪ್ರೀತ್ಸಿಂಗ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಮಹಮ್ಮದ್ ಖುದ್ದೂಸ್, ರೈಸಿಂಗ್ ಹ್ಯಾಂಡ್ ಯುತ್ ಆರ್ಗನೈಸೇಷನ್ ಅಧ್ಯಕ್ಷ ಸತೀಶ್ ಬೆಳಕೋಟೆ, ನಮ್ಮ ಬೀದರ್ ಯುವಚೇತನ ಅಭಿವೃದ್ಧಿ ಸಂಘದ ಅಧ್ಯಕ್ಷ ಪ್ರದೀಪ್ ಕಾಂಬಳೆ, ಯುವ ಮುಖಂಡ ಪವನಕುಮಾರ ಲೋಣಿ ಇದ್ದರು. ಕೋವಿಡ್ ಕಾರಣ ಕಾರ್ಯಕ್ರಮದಲ್ಲಿ ಸುರಕ್ಷಿತ ಅಂತರ ಕಾಪಾಡಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.