ಭಾನುವಾರ, ಡಿಸೆಂಬರ್ 4, 2022
21 °C

ತುಳಜಾಪುರದಲ್ಲಿ ದೇವಿ ಪಲ್ಲಕ್ಕಿ ಮೆರವಣಿಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಔರಾದ್: ತಾಲ್ಲೂಕಿನ ತುಳಜಾಪುರ ಗ್ರಾಮದಲ್ಲಿ ವಿಜಯದಶಮಿ ಪ್ರಯುಕ್ತ ಶ್ರದ್ಧಾ–ಭಕ್ತಿಯಿಂದ ದೇವಿ ಪಲ್ಲಕ್ಕಿ ಮೆರವಣಿಗೆ ನಡೆಯಿತು.

ಮಂದಿರದಿಂದ ಗ್ರಾಮದ ಪ್ರಮುಖ ಬೀದಿಗಳಲ್ಲಿ ನಡೆದ ಅಲಂಕೃತ ಪಲ್ಲಕ್ಕಿಯ ಮೆರವಣಿಗೆಯಲ್ಲಿ ನೂರಾರು ಜನ ಪಾಲ್ಗೊಂಡಿದ್ದರು. ಭಜನೆ, ಯುವಕರ ನರ್ತನ ಮೆರವಣಿಗೆಗೆ ಕಳೆ ಕಟ್ಟಿದವು. ದೇವಿಗೆ ಜಯಕಾರದ ಘೋಷಣೆ ಮೊಳಗಿದವು.

ಕೋವಿಡ್ ನಿಯಂತ್ರಣಕ್ಕೆ ಬಂದ ಕಾರಣ ಈ ಬಾರಿ ಗ್ರಾಮದಲ್ಲಿ ವಿಜಯದಶಮಿ, ದೇವಿ ಪಲ್ಲಕ್ಕಿ ಉತ್ಸವ ವೈಭವದಿಂದ ನಡೆದಿದೆ. ಜಿಲ್ಲೆ ಹಾಗೂ ನೆರೆ ರಾಜ್ಯಗಳ ಭಕ್ತರು ದೇವಿ ಮಂದಿರದಲ್ಲಿ ನಡೆದ ವಿವಿಧ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದಾರೆ. ದೇವಿಗೆ ಭಕ್ತಿ ಸಮರ್ಪಣೆ ಮಾಡಿದ್ದಾರೆ ಎಂದು ಗ್ರಾಮದ ಆರಿಫ್ ಮುಲ್ಲಾ ತಿಳಿಸಿದರು.

ದೇವಿ ಮಂದಿರದಲ್ಲಿ ವಿಶೇಷ ಪೂಜೆ ಸೇರಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. ಅನೇಕರು ಹರಕೆ ತೀರಿಸಿದರು. ಭಕ್ತರಿಗೆ ಮಹಾ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.