ಸೋಮವಾರ, ಏಪ್ರಿಲ್ 19, 2021
23 °C

ಸಮಾಜದ ಹಿತಕ್ಕಾಗಿ ಮುಳೆ ಕಣದಿಂದ ಹಿಂದಕ್ಕೆ: ದಿಗಂಬರರಾವ್ ಮಾನಕರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಸವಕಲ್ಯಾಣ: ‘ಮಾಜಿ ಶಾಸಕ ಎಂ.ಜಿ.ಮುಳೆ ಅವರು ಸಮಾಜದ ಹಿತಕ್ಕಾಗಿ ಈ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಎನ್.ಸಿ.ಪಿ ಯಿಂದ ಸಲ್ಲಿಸಿದ ನಾಮಪತ್ರ ಹಿಂದಕ್ಕೆ ಪಡೆದಿದ್ದಾರೆ. ಆದ್ದರಿಂದ ಅವರನ್ನು ಬೆಂಬಲಿಸುತ್ತೇವೆ’ ಎಂದು ಕರ್ನಾಟಕ ಕ್ಷತ್ರೀಯ ಮರಾಠಾ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ದಿಗಂಬರರಾವ್ ಮಾನಕರಿ ಹೇಳಿದರು.

ಮಂಗಳವಾರ ಇಲ್ಲಿನ ಮುಳೆ ನಿವಾಸದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿ ಯಲ್ಲಿ ಅವರು ಮಾತನಾಡಿದರು.

‘ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮರಾಠಾ ಸಮಾಜದ 6 ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದ್ದರಿಂದ ಮುಳೆ ಅವರು ಚುನಾವಣಾ ಕಣದಿಂದ ಹಿಂದಕ್ಕೆ ಸರಿದಿದ್ದಾರೆ. ಈ ಬಗ್ಗೆ ಯಾರೂ ತಪ್ಪು ತಿಳಿಯಬಾರದು’ ಎಂದು ಕೋರಿದರು.

ಮರಾಠಾ ಕ್ರಾಂತಿ ಮೋರ್ಚಾ ಜಿಲ್ಲಾ ಸಂಯೋಜಕ ವೆಂಕಟೇಶರಾವ್ ಮಾಯಿಂದೆ, ಮುಖಂಡ ಜನಾರ್ದನ್‌ ಬಿರಾದಾರ, ಪರಿಷತ್‌ ತಾಲ್ಲೂಕು ಘಟಕದ ಅಧ್ಯಕ್ಷ ವಿ.ಟಿ.ಶಿಂಧೆ, ತಾತೇ ರಾವ್ ಪಾಟೀಲ, ರಾವಸಾಬ್ ಇದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.