ಮನರೇಗಾ ಯೋಜನೆಯ ಹೆಸರು ತೆಗೆದು ಹಾಕುವುದರ ಜತೆಗೆ ಬಡವರ ಜೀವನೋಪಾಯದ ಮೇಲೂ ಹೊಡೆಯುವ ಈ ಕ್ರಮ ಅತಿರೇಕದ ಪರಮಾವಧಿಯಾಗಿದೆ. ಗ್ರಾಮೀಣ ಜನರ ಹಕ್ಕುಗಳನ್ನು ಕಾಪಾಡಲು ಮತ್ತು ಮನರೇಗಾ ಯೋಜನೆ ಮರುಸ್ಥಾಪಿಸಲು ಕಾಂಗ್ರೆಸ್ ಪಕ್ಷದ ಹೋರಾಟ ಮುಂದುವರೆಯಲಿದೆ.
ಈಶ್ವರ ಬಿ. ಖಂಡ್ರೆ ಜಿಲ್ಲಾ ಉಸ್ತುವಾರಿ ಸಚಿವ
ಕೋವಿಡ್ ಸಮಯದಲ್ಲಿ ಖಾತ್ರಿ ಯೋಜನೆ ಗ್ರಾಮೀಣ ಜನರು ಹಾಗೂ ವಲಸೆ ಕಾರ್ಮಿಕರ ಬದುಕಿಗೆ ಆಸರೆಯಾಗಿತ್ತು . ಅದನ್ನು ದುರ್ಬಲಗೊಳಿಸುತ್ತಿರುವ ಕೇಂದ್ರ ಸರ್ಕಾರದ ಕ್ರಮ ಖಂಡನಾರ್ಹ. ಇದರ ವಿರುದ್ಧ ಕಾಂಗ್ರೆಸ್ ಹೋರಾಟ ನಡೆಸಲಿದೆ.