ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಬಿಸಿಯೂಟ ನೌಕರರ ಬೇಡಿಕೆ ಈಡೇರಿಸಿ’

Last Updated 14 ಆಗಸ್ಟ್ 2020, 10:46 IST
ಅಕ್ಷರ ಗಾತ್ರ

ಹುಮನಬಾದ್: ಬಿಸಿಯೂಟ ನೌಕರರಿಗೆ ಎಲ್‍ಐಸಿ ಆಧಾರಿತ ಪಿಂಚಣಿ ನಿಗದಿ ಮಾಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘದ (ಸಿಐಟಿಯು) ತಾಲ್ಲೂಕು ಘಟಕದ ಪದಾಧಿಕಾರಿಗಳು ಕ್ಷೇತ್ರ ಶಿಕ್ಷಣಾಧಿಕಾರಿ ಶಿವಗುಂಡಪ್ಪ ಅವರಿಗೆ ಗುರುವಾರ ಮನವಿ ಸಲ್ಲಿಸಿದರು.

ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷೆ ರೇಖಾ ಹಮಿಲಪುರಕರ್ ಮಾತನಾಡಿ,‘ಬಿಸಿಯೂಟದ ನೌಕರರಿಗೆ ಏಪ್ರಿಲ್‌ ತಿಂಗಳಿಂದ ಶಾಲೆ ಪ್ರಾರಂಭ ಆಗುವವರೆಗೆ ವೇತನ ಪಾವತಿ ಮಾಡಬೇಕು. ಮುಂದಿನ ಆರು ತಿಂಗಳವರೆಗೆ ಪಡಿತರ ಸೇರಿದಂತೆ ₹7,500 ಸಹಾಯಧನ ಒದಗಿಸಬೇಕು’ ಎಂದು ಒತ್ತಾಯಿಸಿದರು.

ಬಿಸಿಯೂಟದ ನೌಕರರನ್ನು ಕಾಯಂ ಮಾಡಿ ಶಾಸನಾತ್ಮಕ ಸವಲತ್ತುಗಳನ್ನು ಒದಗಿಸಬೇಕು. ಕೋವಿಡ್ ಕ್ವಾರಂಟೈನ್‌ ಕೇಂದ್ರದಲ್ಲಿದ್ದವರಿಗೆ ಅಡುಗೆ ಮಾಡಿ ಬಡಿಸುತ್ತಿರುವ ನೌಕರರಿಗೆ ವೇತನ ಪಾವತಿಸಬೇಕು. ಮತ್ತು ಐಎಲ್‍ಸಿ ಶಿಫಾರಸ್ಸುಗಳನ್ನು ಕೂಡಲೇ ಜಾರಿ ಮಾಡಬೇಕು ಎಂದು ಒತ್ತಾಯಿಸಿದರು.

ಕಾರ್ಯದರ್ಶಿ ಮಂಜುಳಾ ಹಾಲಹಳ್ಳಿ, ಸಹ ಕಾರ್ಯದರ್ಶಿ ಪ್ರಭು ಸಂತೋಷಕರ್. ತಾಲ್ಲೂಕು ಉಪಾಧ್ಯಕ್ಷೆ ಜೈಶ್ರೀ ಜಾಧವ ಹಾಗೂ ಕೋಶಾಧ್ಯಕ್ಷೆ ಆರತಿ ಮೇಲಕೇರಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT