ಔರಾದ್ (ಬೀದರ್ ಜಿಲ್ಲೆ): ತಾಲ್ಲೂಕಿನ ಜಮಾಲಪೂರ ಸರ್ಕಾರಿ ಪ್ರಾಥಮಿಕ ಶಾಲೆಯ 50 ಮಕ್ಕಳು ಬಿಸಿಯೂಟ ಸೇವಿಸಿ ಅಸ್ವಸ್ಥಗೊಂಡು ಮಂಗಳವಾರ ಔರಾದ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಶಾಲೆಯಲ್ಲಿ ಮಧ್ಯಾಹ್ನ ಬಿಸಿಯೂಟ ಮಾಡಿದ ಕೆಲ ಮಕ್ಕಳಿಗೆ ಹೊಟ್ಟೆ ನೋವು ಕಾಣಿಸಿಕೊಂಡು ವಾಂತಿ ಆಗಿದೆ. ಇದರಿಂದ ಬೇರೆ ವಿದ್ಯಾರ್ಥಿಗಳಲ್ಲೂ ಆತಂಕ ಶುರುವಾಗಿದೆ. ಶಿಕ್ಷಕರು ತಕ್ಷಣ ಆಸ್ಪತ್ರೆಗೆ ಸುದ್ದಿ ಮುಟ್ಟಿಸಿ ಅಂಬುಲೆನ್ಸ್ನಲ್ಲಿ ಎಲ್ಲ ಮಕ್ಕಳನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ತಂದು ತಪಾಸಣೆ ನಡೆಸಿ ಚಿಕಿತ್ಸೆ ಕೊಡಿಸಿದ್ದಾರೆ.

ಆಸ್ಪತ್ರೆಗೆ ಬಂದ ವಿದ್ಯಾರ್ಥಿಗಳ ಪೈಕಿ 20 ವಿದ್ಯಾರ್ಥಿಗಳಲ್ಲಿ ಹೊಟ್ಟೆ ನೋವು ಇದೆ. ಅವರೆಲ್ಲರಿಗೂ ಚಿಕಿತ್ಸೆ ಕೊಡುತ್ತಿದ್ದೇವೆ. ಬಿಸಿಯೂಟ ಸೇವನೆಯಲ್ಲಿ ಸಮಸ್ಯೆ ಆಗಿರಬಹುದು. ಪರಿಶೀಲನೆ ನಡೆಯುತ್ತಿದೆ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಗಾಯತ್ರಿ ತಿಳಿಸಿದ್ದಾರೆ.

ತಹಶೀಲ್ದಾರ್ ಮಹೇಶ್ ಪಾಟೀಲ, ಬಿಸಿಯೂಟ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿ, ಎಲ್ಲ ಮಕ್ಕಳು ಆರೋಗ್ಯವಂತರಾಗಿದ್ದಾರೆ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.