ಬೀದರ್: ಮಧ್ಯಪ್ರಾಚ್ಯದ ಕೆಲವು ದೇಶಗಳಲ್ಲಿ ಅಸ್ಥಿರ ಪರಿಸ್ಥಿತಿ ನಿರ್ಮಾಣವಾಗಿ ಅಂತರರಾಷ್ಟ್ರೀಯ ವಿಮಾನ ಸೇವೆಗಳಲ್ಲಿ ವ್ಯತ್ಯಯ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಬೀದರ್ ಜಿಲ್ಲೆಯ ನಿವಾಸಿಗಳು ಅಥವಾ ಅವರ ಸಂಬಂಧಿಕರು ಹೆಚ್ಚಿನ ಮಾಹಿತಿಗಾಗಿ ಹಾಗೂ ಈ ಸಹಾಯಕ್ಕಾಗಿ ಬೀದರ್ ಜಿಲ್ಲಾ ತುರ್ತು ಕಾರ್ಯಾಚರಣೆ ಕೇಂದ್ರ 08482-225409, ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರ 080-22340676, 080-22253707, ಟೋಲ್ ಫ್ರೀ ಸಂಖ್ಯೆ : 1070 ಕರೆ ಮಾಡಿ ಮಾಹಿತಿ ಹಾಗೂ ಸಹಾಯ ಪಡೆಯಬಹುದು ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇರಾನ್, ಇಸ್ರೇಲ್, ಲೆಬನಾನ್, ಸೌದಿ ಅರೇಬಿಯಾ ಸೇರಿದಂತೆ ಒಟ್ಟು 11 ದೇಶಗಳ ವೈಮಾನಿಕ ಮಾರ್ಗಗಳನ್ನು ಮಾ. 2ರ ವರೆಗೆ ಮುಚ್ಚಲಾಗಿದೆ. ಈ ಅನಿರೀಕ್ಷಿತ ಅಡಚಣೆಯಿಂದಾಗಿ ಹಾಗೂ ಕರ್ನಾಟಕದ ಅನೇಕ ಪ್ರಯಾಣಿಕರು ಯುಎಇ (ದುಬೈ) ಸೇರಿದಂತೆ ವಿವಿಧ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಸಿಲುಕಿಕೊಂಡಿದ್ದಾರೆ. ಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರ ನಿರ್ದೇಶನದಂತೆ, ರಾಜ್ಯ ಮತ್ತು ಜಿಲ್ಲಾ ತುರ್ತು ಕಾರ್ಯಾಚರಣೆ ಕೇಂದ್ರ 24x7 ಕಾರ್ಯನಿರ್ವಹಿಸುತ್ತಿವೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮತ್ತು ಭಾರತೀಯ ರಾಯಭಾರಿ ಕಚೇರಿಗಳು ನೀಡುವ ಸೂಚನೆಗಳನ್ನು ಜಿಲ್ಲಾಡಳಿತವು ನಿರಂತರವಾಗಿ ಗಮನಿಸುತ್ತಿದೆ ಎಂದು ತಿಳಿಸಿದ್ದಾರೆ.

ಮಧ್ಯಪ್ರಾಚ್ಯ ದೇಶಗಳಲ್ಲಿರುವ ಕರ್ನಾಟಕದ ನಿವಾಸಿಗಳು ಹಾಗೂ ಜಿಲ್ಲೆಯವರಿದ್ದಲ್ಲಿ ಅಲ್ಲಿನ ಸ್ಥಳೀಯ ಸರ್ಕಾರಗಳು ನೀಡುವ ಸುರಕ್ಷತಾ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಸಂಕಷ್ಟದಲ್ಲಿರುವವರು ಆಯಾ ದೇಶದ ಭಾರತೀಯ ರಾಯಭಾರ ಕಚೇರಿಯ ಸಹಾಯವಾಣಿಗೆ ಕರೆ ಮಾಡಬೇಕು. 'ಸಾರಥಿ ಸಹಾಯತಾ' (Sarthi Sahayata) ಪೋರ್ಟಲ್ನಲ್ಲಿ ನೋಂದಾಯಿಸಿಕೊಳ್ಳಬೇಕು. ವೀಸಾ ಸಂಬಂಧಿತ ಸಮಸ್ಯೆಗಳಿದ್ದಲ್ಲಿ ಹತ್ತಿರದ ಎಫ್.ಆರ್.ಆರ್.ಒ (FRRO) ಕಚೇರಿಯನ್ನು ಸಂಪರ್ಕಿಸಬೇಕೆಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.