ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಮೌಲ್ಯಾಧಾರಿತ ಶಿಕ್ಷಣ ಇಂದಿನ ತುರ್ತು’

ಶಿಕ್ಷಕರ ದಿನಾಚರಣೆಯಲ್ಲಿ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವ ಬಿ.ಸಿ.ನಾಗೇಶ್‌ ಹೇಳಿಕೆ
Last Updated 27 ಸೆಪ್ಟೆಂಬರ್ 2022, 4:42 IST
ಅಕ್ಷರ ಗಾತ್ರ

ಭಾಲ್ಕಿ: ‘ಇಂದಿನ ಶಿಕ್ಷಣ ವ್ಯವಸ್ಥೆ ಕಲುಷಿತಗೊಳ್ಳುತ್ತಿದ್ದು, ಅದನ್ನು ಸರಿಪಡಿಸುವ ಕೆಲಸ ಆಗಬೇಕಿದೆ. ರಾಷ್ಟ್ರಭಕ್ತಿ, ನೈತಿಕತೆ, ಮಾನವೀಯ ಮೌಲ್ಯ ಸಾರುವ ಶಿಕ್ಷಣ ಇಂದಿನ ಅಗತ್ಯವಾಗಿದೆ’ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವ ಬಿ.ಸಿ.ನಾಗೇಶ್ಹೇಳಿದರು.

ತಾಲ್ಲೂಕಿನ ಕರಡ್ಯಾಳದ ಚನ್ನಬಸವೇಶ್ವರ ಗುರುಕುಲ ಅನುಭವ ಮಂಟಪದಲ್ಲಿ ಸೋಮವಾರ ನಡೆದ ಶಿಕ್ಷಕರ ದಿನಾಚರಣೆ ಮತ್ತು ಗುರುಕುಲ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಮಾತನಾಡಿ,‘ಹಿಂದಿನವರ ತಪ್ಪು ನೀತಿಯಿಂದ ಶಿಕ್ಷಣದಲ್ಲಿನ ಮೌಲ್ಯ ಕುಸಿಯುತ್ತಿದೆ. ಅದನ್ನು ಸರಿಪಡಿಸುವ ಕೆಲಸ ನಾವು ಮಾಡುತ್ತಿದ್ದೇವೆ’ ಎಂದರು.

ಸಾನ್ನಿಧ್ಯ ವಹಿಸಿದ್ದ ಡಾ.ಬಸವಲಿಂಗ ಪಟ್ಟದ್ದೇವರು ಮಾತನಾಡಿ,‘ಮಕ್ಕಳಿಗೆ ಉತ್ತಮ ಶಿಕ್ಷಣ ಕಲ್ಪಿಸುವ ಉದ್ದೇಶದಿಂದ ಪಠ್ಯಕ್ಕೆ ಮಾನವೀಯ ಮೌಲ್ಯ, ನೈತಿಕ ಶಿಕ್ಷಣ ಸೇರ್ಪಡೆ ಮಾಡಲು ಶಿಕ್ಷಣ ಇಲಾಖೆ ಮುಂದಾಗಿರುವುದು ಸ್ವಾಗತಾರ್ಹ. ಇದರ ಜತೆಗೆ ಬಸವಾದಿ ಶರಣರ ವಚನಗಳನ್ನು ಸೇರಿಸಿದರೇ ಮತ್ತಷ್ಟು ಉಪಯುಕ್ತ ಆಗಲಿದೆ’ ಎಂದು ಅಭಿಪ್ರಾಯಪಟ್ಟರು.

ಪ್ರಾಚಾರ್ಯ ಬಸವರಾಜ ಮೊಳಕೀರೆ ಪ್ರಾಸ್ತಾವಿಕವಾಗಿ ಮಾತನಾಡಿದರು.

ಪೀಠಾಧಿಪತಿ ಗುರುಬಸವ ಪಟ್ಟದ್ದೇವರು, ಮಹಾಲಿಂಗ ಸ್ವಾಮೀಜಿ ನೇತೃತ್ವ ವಹಿಸಿದ್ದರು. ವಿಧಾನ ಪರಿಷತ್ ಸದಸ್ಯ ಶಶೀಲ್ ನಮೋಶಿ, ಶಿಕ್ಷಣ ಇಲಾಖೆ ಹೆಚ್ಚುವರಿ ಆಯುಕ್ತೆ ಗರೀಮಾ ಪನ್ವಾರ್, ಸಂಸ್ಥೆಯ ನಿರ್ದೇಶಕ ಶಶಿಧರ ಕೋಸಂಬೆ, ಬೀದರ್ ಡಿಡಿಪಿಯು ಚಂದ್ರಕಾಂತ ಶಾಬಾದಿಕರ್, ಡಿಡಿಪಿಐ ಗಣಪತಿ ಬಾದಟಕೆ, ಕ್ಷೇತ್ರ ಶಿಕ್ಷಣಾಧಿಕಾರಿ ಮಜಹರ್ ಹುಸೇನ್ ಇದ್ದರು.

ಆಡಳಿತಾಧಿಕಾರಿ ಮೋಹನ ರೆಡ್ಡಿ ಸ್ವಾಗತಿಸಿದರು. ಮಧುಕರ್ ಗಾಂವಕರ್ ನಿರೂಪಿಸಿದರು. ಪ್ರಾಚಾರ್ಯ ಬಸವರಾಜ ಮೊಳಕೀರೆ ಅವರಿಗೆ ಗುರುಕುಲ ಆದರ್ಶ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಬಸವರಾಜ ಮೊಳಕೀರೆ ದಂಪತಿಯನ್ನು ಸನ್ಮಾನಿಸಿ, ಪ್ರಶಸ್ತಿ ಫಲಕ ಮತ್ತು ₹25 ಸಾವಿರ ಚೆಕ್ ನೀಡಿ ಅಭಿನಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT