ಮಂಗಳವಾರ, ಜುಲೈ 27, 2021
27 °C

ಜನ್ಮದಿನ ಸರಳ ಆಚರಣೆಗೆ ಸಚಿವ ಚವಾಣ್ ನಿರ್ಧಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ಕೋವಿಡ್ ಕಾರಣ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ಅವರು ಈ ಬಾರಿಯ ತಮ್ಮ ಜನ್ಮದಿನವನ್ನು ಸರಳವಾಗಿ ಆಚರಿಸಿಕೊಳ್ಳಲು ನಿರ್ಧರಿಸಿದ್ದಾರೆ.

ಕೋವಿಡ್ ಎರಡನೇ ಅಲೆಯಿಂದ ಈಗಷ್ಟೇ ರಾಜ್ಯದ ಜನ ಚೇತರಿಸಿಕೊಳ್ಳುತ್ತಿರುವ ಕಾರಣ ಯಾವುದೇ ಸಂಭ್ರಮಗಳಿಗೆ ಅವಕಾಶ ನೀಡದೆ, ತಮ್ಮ ಸ್ವಗ್ರಾಮ ಔರಾದ್ ತಾಲ್ಲೂಕಿನ ಬೋಂತಿ ತಾಂಡಾದಲ್ಲಿ ಗೋ ಪೂಜೆ ಹಾಗೂ ಲಸಿಕಾಕರಣ ಕಾರ್ಯಕ್ರಮಕ್ಕೆ ಚಾಲನೆ ನೀಡುವ ಮೂಲಕ ಜನ್ಮದಿನ ಆಚರಿಸಿಕೊಳ್ಳಲಿದ್ದಾರೆ.

ತಮ್ಮ ಜನ್ಮದಿನದ ಪ್ರಯುಕ್ತ ಯಾರೂ ಬ್ಯಾನರ್, ಕಟೌಟ್, ಫ್ಲೆಕ್ಸ್, ಅದ್ದೂರಿ ಕಾರ್ಯಕ್ರಮಗಳಿಗೆ ದುಂದು ವೆಚ್ಚ ಮಾಡಬಾರದು. ಅದೇ ಹಣದಿಂದ ಗೋಶಾಲೆಗಳಿಗೆ ಮೇವು, ಪ್ರಾಣಿಗಳ ಸಂರಕ್ಷಣೆ, ಬಡ ವಿದ್ಯಾರ್ಥಿಗಳಿಗೆ ಪುಸ್ತಕ, ಇತರ ಸಾಮಗ್ರಿಗಳ ವಿತರಣೆ, ಬಡವರು, ಅನಾಥಾಶ್ರಮ ಹಾಗೂ ವೃದ್ಧಾಶ್ರಮಗಳಿಗೆ ನೆರವು ನೀಡಬೇಕು ಎಂದು ಸಚಿವರು ಪಕ್ಷದ ಕಾರ್ಯಕರ್ತರು ಹಾಗೂ ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ ಎಂದು ಸಚಿವರ ವಿಶೇಷ ಕರ್ತವ್ಯಾಧಿಕಾರಿ ಶಿವಕುಮಾರ ಕಟ್ಟೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಚವಾಣ್ ಅವರ ಜನ್ಮದಿನ ಜುಲೈ 6 ರಂದು ಇದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು