ನೀರು ಹರಿಸಲು ಸಚಿವರ ಸೂಚನೆ
ಔರಾದ್: ತಾಲ್ಲೂಕಿನ ಸಂಗಮ, ಹಾಲಹಳ್ಳಿ, ಕಂದಗೂಳ ಹಾಗೂ ಮತ್ತಿತರೆ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದೆ. ಹೀಗಾಗಿ ಜನ ಮತ್ತು ಜಾನುವಾರುಗಳಿಗೆ ನೀರು ಪೂರೈಸುವಂತಾಗಲು ಕಾರಂಜಾ ಜಲಾಶಯದಿಂದ ಮಾಂಜ್ರಾ ನದಿಗೆ ನೀರು ಹರಿಸಬೇಕು ಎಂದು ಪಶು ಸಂಗೋಪನೆ ಸಚಿವ ಪ್ರಭು ಚವಾಣ್ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ.
ಬೇಸಿಗೆ ಆರಂಭವಾಗಿದ್ದು, ಔರಾದ್(ಬಿ) ಹಾಗೂ ಕಮಲನಗರ ತಾಲ್ಲೂಕಿನ ಕೆಲವು ಗ್ರಾಮಗಳಲ್ಲಿ ಕುಡಿಯುವ ನೀರಿನ ಕೊರತೆಯಾಗಿದೆ. ಬೇಸಿಗೆ ಅವಧಿಯಲ್ಲಿ ಸಹಜವಾಗಿ ನೀರಿನ ಸಮಸ್ಯೆ ಎದುರಾಗುತ್ತದೆ. ಪಶು, ಪಕ್ಷಿಗಳು ಮತ್ತು ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಮಾಂಜ್ರಾ ನದಿಗೆ ನೀರು ಹರಿಸಿದಲ್ಲಿ ಈ ನದಿಯ ವ್ಯಾಪ್ತಿಯಲ್ಲಿ ಬರುವ ಸುಮಾರು 30 ಗ್ರಾಮಗಳು ಸೇರಿದಂತೆ ಭಾಲ್ಕಿ ತಾಲ್ಲೂಕಿನ ಹಲವು ಗ್ರಾಮಸ್ಥರಿಗೆ ಅನುಕೂಲವಾಗಲಿದೆ ಎಂದು ಅವರು ಹೇಳಿದ್ದಾರೆ.ಅಧಿಕಾರಿಗ ಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಯಾವ ಗ್ರಾಮದಲ್ಲಿ ನೀರಿನ ಸಮಸ್ಯೆಯಾಗುತ್ತಿದೆ ಎಂಬುದರ ಬಗ್ಗೆ ಮಾಹಿತಿ ಪಡೆಯುತ್ತಿದ್ದೇನೆ.
ಮಾಂಜ್ರಾ ನದಿಗೆ ನೀರು ಹರಿಸುವ ಬಗ್ಗೆ ಪ್ರಾದೇಶಿಕ ಆಯುಕ್ತರಿಗೆ ಪತ್ರ ಬರೆದು ತಿಳಿಸಿದ್ದೇನೆ. ನಾಳೆಯೇ ನೀರು ಹರಿಸುವಂತೆ ದೂರವಾಣಿ ಮುಖಾಂತರ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಹೇಳಿದ್ದಾರೆ. ನೀರಿನ ಸಮಸ್ಯೆಯಿರುವ ಗ್ರಾಮಗಳಿಗೆ ತುರ್ತಾಗಿ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು. ಮೋಟಾರ್ ಕೆಟ್ಟು ಹೋಗುವುದು, ವಿದ್ಯುತ್ ಪರಿಕರಗಳ ಹಾನಿಯಂತಹ ಸಣ್ಣಪುಟ್ಟ ಸಮಸ್ಯೆಗಳಿದ್ದರೆ ಸರಿಪಡಿಸಿಕೊಳ್ಳಬೇಕು ಎಂದು ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.