ಗುರುವಾರ, 1 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೃಷಿ ಸಚಿವ ರಾಜೀನಾಮೆಗೆ ಒತ್ತಾಯ

ರೈತ ಸಂಘದ ಅಧ್ಯಕ್ಷರ ವಿರುದ್ಧ ಅನುಚಿತ ಪದ ಪ್ರಯೋಗಕ್ಕೆ ಖಂಡನೆ
Last Updated 15 ಸೆಪ್ಟೆಂಬರ್ 2020, 16:17 IST
ಅಕ್ಷರ ಗಾತ್ರ

ಬೀದರ್: ಅನುಚಿತ ಪದಗಳನ್ನು ಬಳಸಿ ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ಅವರನ್ನು ಟೀಕಿಸಿರುವ ಕೃಷಿ ಸಚಿವ ಬಿ.ಸಿ. ಪಾಟೀಲ ಅವರು ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಘಟಕದ ಪದಾಧಿಕಾರಿಗಳು ನಗರದಲ್ಲಿ ಮಂಗಳವಾರ ಪ್ರತಿಭಟನಾ ಮೆರವಣಿಗೆ ನಡೆಸಿದರು.

ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಮರವಣಿಗೆ ನಡೆಸಿ ಮುಖ್ಯಮಂತ್ರಿಗೆ ಬರೆದ ಮನವಿ ಪತ್ರವನ್ನು ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗೆ ಸಲ್ಲಿಸಿದರು.

‘ರೈತರ ಮಕ್ಕಳಿಗೆ ಸಂಬಂಧಿಸಿದ ಪರೀಕ್ಷೆ ರದ್ದುಪಡಿಸಿ ಅವರಿಗೆ ತೊಂದರೆ ಉಂಟು ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಸಚಿವರು ಕೋಡಿಹಳ್ಳಿ ಅವರ ಕುರಿತು ಇಲ್ಲ ಸಲ್ಲದ ಹೇಳಿಕೆ ನೀಡಿದ್ದಾರೆ. ಅಜ್ಞಾನಿ ಎಂದು ಟೀಕಿಸಿದ್ದಾರೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸಚಿವ ಪಾಟೀಲ ಅವರಿಗೆ ಕೋಡಿಹಳ್ಳಿ ಅವರ ಕ್ಷಮೆಯಾಚಿಸಲು ಸೂಚಿಸಬೇಕು. ಇಲ್ಲವಾದಲ್ಲಿ ಬರುವ ದಿನಗಳಲ್ಲಿ ಜಿಲ್ಲೆಯಲ್ಲಿ ಉಗ್ರ ಹೋರಾಟ ನಡೆಸಲಾಗುವುದು’ ಎಂದು ಎಚ್ಚರಿಸಿದರು.

ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಸಿದ್ರಾಮಪ್ಪ ಆಣದೂರೆ, ಕಾರ್ಯಾಧ್ಯಕ್ಷ ಶ್ರೀಮಂತ ಬಿರಾದಾರ, ಉಪಾಧ್ಯಕ್ಷ ಸಿದ್ದಪ್ಪ ಭೂಶೆಟ್ಟಿ, ಪ್ರಧಾನ ಕಾರ್ಯದರ್ಶಿ ದಯಾನಂದ ಸ್ವಾಮಿ ಸಿರ್ಸಿ, ಶಂಕರೆಪ್ಪ ಪಾರಾ, ಚಂದ್ರಶೇಖರ ಜಮಖಂಡಿ, ಪ್ರವೀಣ ಕುಲಕರ್ಣಿ, ಸತೀಶ ನನ್ನೂರೆ, ಶೇಷರಾವ್ ಕಣಜಿ, ಬಾಬುರಾವ್ ಜೊಳದಾಪಕಾ, ನಾಗಯ್ಯ ಸ್ವಾಮಿ ಭಾಗವಹಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT