ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

1,760 ಅಂಗವಿಕಲರಿಗೆ ಮನೆ: ಸಚಿವ ವಿ. ಸೋಮಣ್ಣ ಭರವಸೆ

Last Updated 24 ಡಿಸೆಂಬರ್ 2019, 15:55 IST
ಅಕ್ಷರ ಗಾತ್ರ

ಬೀದರ್: ಬೀದರ್ ಹಾಗೂ ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ತಾಲ್ಲೂಕಿನ 35 ಗ್ರಾಮ ಪಂಚಾಯಿತಿ ಅಧೀನದ ಗ್ರಾಮಗಳ 1,760 ಅಂಗವಿಕಲರಿಗೆ ವಿಶೇಷ ವರ್ಗದ ಅಂಗವಿಕಲರ ವಸತಿ ಯೋಜನೆಯಡಿ ಮನೆ ಮಂಜೂರು ಮಾಡಲಾಗುವುದು ಎಂದು ವಸತಿ ಸಚಿವ ವಿ. ಸೋಮಣ್ಣ ಭರವಸೆ ನೀಡಿದರು.

ನಗರಕ್ಕೆ ಭಾನುವಾರ ಭೇಟಿ ನೀಡಿದ ಅವರಿಗೆ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಸೂರ್ಯಕಾಂತ ನಾಗಮಾರಪಳ್ಳಿ ಹಾಗೂ ಜಿಲ್ಲಾ ಘಟಕದ ಅಧ್ಯಕ್ಷ ಶೈಲೇಂದ್ರ ಬೆಲ್ದಾಳೆ ಅಂಗವಿಕಲರಿಗೆ ಮನೆ ಮಂಜೂರು ಮಾಡುವಂತೆ ಗ್ರಾಮ ಪಂಚಾಯಿತಿವಾರು ಫಲಾನುಭವಿಗಳ ಹೆಸರು ಸಮೇತ ಮನವಿ ಸಲ್ಲಿಸಿದರು.

ಮನವಿಯನ್ನು ಪುರಸ್ಕರಿಸಿದ ಸಚಿವರು, ಈ ಕುರಿತು ರಾಜೀವಗಾಂಧಿ ಗ್ರಾಮೀಣ ವಸತಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಿಗೆ ನಿರ್ದೇಶನ ನೀಡಲಾಗುವುದು. ನಾಲ್ಕೈದು ತಿಂಗಳಲ್ಲಿ ಮನೆ ಕಟ್ಟಿಸಿಕೊಡಲಾಗುವುದು ಎಂದು ತಿಳಿಸಿದರು.

ಹಿಂದೆ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ನನ್ನ ಮನವಿಯ ಕಾರಣ ಬೀದರ್ ತಾಲ್ಲೂಕಿನ 35
ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯ 2,655 ಅಂಗವಿಕಲರಿಗೆ ಮನೆ ಮಂಜೂರು ಮಾಡಲಾಗಿತ್ತು. ಇದೀಗ ಮತ್ತೆ 1,760 ಮನೆಗಳು ದೊರೆಯಲಿವೆ ಎಂದು ಸೂರ್ಯಕಾಂತ ನಾಗಮಾರಪಳ್ಳಿ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT