ಬುಧವಾರ, ಮಾರ್ಚ್ 29, 2023
30 °C

ಖೂಬಾಗೆ ಸಚಿವ ಸ್ಥಾನ: ಪಾಪನಾಶ ದೇಗುಲದಲ್ಲಿ ವಿಶೇಷ ಪೂಜೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ಸಂಸದ ಭಗವಂತ ಖೂಬಾ ಅವರಿಗೆ ಕೇಂದ್ರ ಸಚಿವ ಸ್ಥಾನ ದೊರೆತ ಕಾರಣ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಗುರುವಾರ ಇಲ್ಲಿಯ ಪಾಪನಾಶ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

ದೇವರಿಗೆ ಆರತಿ ಬೆಳಗಿ, ಹೂವು, ಕಾಯಿ, ಕರ್ಪೂರ ಅರ್ಪಿಸಿ ಭಕ್ತಿ ಸಮರ್ಪಿಸಿದರು. ಭಕ್ತರಿಗೆ ಸಿಹಿ ಹಂಚಿ ಸಂಭ್ರಮಿಸಿದರು.

‘ಪ್ರಧಾನಿ ನರೇಂದ್ರ ಮೋದಿ ಅವರು ಭಗವಂತ ಖೂಬಾ ಅವರಿಗೆ ಸಚಿವ ಸ್ಥಾನ ನೀಡುವ ಮೂಲಕ ಬೀದರ್ ಜಿಲ್ಲೆಗೆ ಬಂಪರ್ ಕೊಡುಗೆ ನೀಡಿದ್ದಾರೆ’ ಎಂದು ಬಿಜೆಪಿ ಯುವ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ಚಂದ್ರಶೇಖರ ಪಾಟೀಲ ಶೇಕಾಪುರ ಹೇಳಿದರು.

‘ಬೀದರ್ ಜಿಲ್ಲೆಯ ಇತಿಹಾಸದಲ್ಲೇ ಮೊದಲ ಬಾರಿಗೆ ಕೇಂದ್ರ ಸಚಿವ ಸ್ಥಾನ ಒಲಿದು ಬಂದಿದೆ. ಖೂಬಾ ಅವರಿಂದ ಜಿಲ್ಲೆಗೆ ಅನೇಕ ಹೊಸ ಯೋಜನೆಗಳು ಬರಲಿವೆ. ಜಿಲ್ಲೆಯ ಅಭಿವೃದ್ಧಿಗೆ ಹೊಸ ಆಯಾಮ ಸಿಗಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಯುವ ಮೋರ್ಚಾ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿಗಳಾದ ಶಿವಕುಮಾರ ಸ್ವಾಮಿ, ವೀರೇಶ ಸ್ವಾಮಿ, ಪ್ರಮುಖರಾದ ಅಂಬರೀಷ ಬಟನಾಪುರ, ಸಂತೋಷ ಬಿರಾದಾರ, ಶಿವು ಸುಲ್ತಾನಪುರ, ಸಂಗಮೇಶ ಸ್ವಾಮಿ, ಬಸವರಾಜ ಯರನಳ್ಳಿ ಪಾಲ್ಗೊಂಡಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು