ಹುಮನಾಬಾದ್: ಸಮೀಪದ ಚಿಟಗುಪ್ಪ ತಾಲ್ಲೂಕಿನ ನಾಗನಕೇರಾ ಗ್ರಾಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಭೇಟಿ ನೀಡಿ ಅತಿವೃಷ್ಟಿಯಿಂದ ಹಾನಿಗೊಳಗಾದ ಮನೆಗಳು ಮತ್ತು ಬೆಳೆಯನ್ನು ಪರಿಶೀಲನೆ ನಡೆಸಿದರು.

ನಂತರ ಗ್ರಾಮಸ್ಥರು ಮತ್ತು ಅಧಿಕಾರಿಗಳ ಜೊತೆಗೆ ಸಭೆ ನಡೆಸಿ ಅವರು ಮಾತನಾಡಿದರು. ಗ್ರಾಮದ ಕೆರೆಯ ಹಿನ್ನೀರು ಹರಿವು ಹೆಚ್ಚಿದ್ದಾಗ ಕೆಲವು ಸಾರ್ವಜನಿಕರ ಮನೆಗಳಿಗೆ ನೀರು ನುಗ್ಗಿವೆ. ನೀರಿನಿಂದ ಹಾನಿಗೊಳಗಾದ ಸಾರ್ವಜನಿಕರಿಗೆ ಇರಲು ತಾತ್ಕಾಲಿಕವಾಗಿ ಕಾಳಜಿ ಕೇಂದ್ರ ತೆರೆದು ಎಲ್ಲ ಸೌಲಭ್ಯ ಕಲ್ಪಿಸಲಾಗಿದೆ. ಅತಿವೃಷ್ಟಿ ಬಂದಾಗ ಈ ರೀತಿಯ ಪರಿಸ್ಥಿತಿ ಉಂಟಾಗುತ್ತಿದ್ದು, ಸಮಸ್ಯೆಯನ್ನು ಶಾಶ್ವತವಾಗಿ ಪರಿಹರಿಸಲು ಮನೆಗಳನ್ನು ಬೇರೆ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುವ ಅಗತ್ಯವಿದೆ. ಗ್ರಾಮದಲ್ಲಿ ಸರ್ಕಾರದ ಜಮೀನು ಲಭ್ಯವಿಲ್ಲದಿದ್ದರೆ, ಖಾಸಗಿ ಜಮೀನನ್ನು ಖರೀದಿಸಿ, ಅದರ ವೆಚ್ಚವನ್ನು ಸರ್ಕಾರವೇ ಭರಿಸಿ ಮನೆಗಳನ್ನು ನಿರ್ಮಾಣ ಮಾಡಿಕೊಡಲಾಗುವುದು ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ, ಜಿಲ್ಲಾ ಪಂಚಾಯಿತಿ ಸಿಇಒ ಗಿರೀಶ್ ಬಂದೋಲೆ, ತಹಶೀಲ್ದಾರ್ ಮಂಜುನಾಥ್ ಪಂಚಾಳ್, ಡಿವೈಎಸ್ಪಿ ಜೆ.ಎಸ್.ನ್ಯಾಮೇಗೌಡರ್, ಚಿಟಗುಪ್ಪ ತಾ.ಪಂ.ಅಧಿಕಾರಿ ಲಕ್ಷ್ಮಿ ಬಿರಾದಾರ್ ಸೇರಿದಂತೆ ಇತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.