ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿರೋಧ ಪಕ್ಷಗಳಿಂದ ಕೃಷಿ ಮಸೂದೆಗಳ ಅಪಪ್ರಚಾರ : ಸಂಸದ ಭಗವಂತ ಖೂಬಾ ಆರೋಪ

ಬೀದರ್‌ ಸಂಸದ ಭಗವಂತ ಖೂಬಾ ಆರೋಪ
Last Updated 2 ಅಕ್ಟೋಬರ್ 2020, 15:52 IST
ಅಕ್ಷರ ಗಾತ್ರ

ಬೀದರ್‌: ‘ಕೇಂದ್ರ ಸರ್ಕಾರ ಜಾರಿಗೆ ತರಲು ಹೊರಟಿರುವ ಮಸೂದೆಗಳು ರೈತ ಪರವಾಗಿವೆ. ಆದರೆ, ಮಧ್ಯವರ್ತಿಗಳು, ಖರೀದಿದಾರರ ಪರವಾಗಿರುವ ಪಕ್ಷಗಳು ಮಸೂದೆಗೆ ವಿರೋಧ ವ್ಯಕ್ತಪಡಿಸುತ್ತಿವೆ’ ಎಂದು ಸಂಸದ ಭಗವಂತ ಖೂಬಾ ಆರೋಪಿಸಿದರು.

‘ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ವ್ಯವಸ್ಥೆ ಮುಂದಿನ ದಿನಗಳಲ್ಲೂ ಮುಂದುವರಿಯಲಿದೆ, ಕೃಷಿ ವಲಯದಿಂದ ದೇಶಕ್ಕಿರುವ ನಿರೀಕ್ಷೆ ಹಾಗೂ ಅಗತ್ಯತೆ ಎರಡನ್ನೂ ಹೊಸ ಮಸೂದೆಗಳು ಪೂರೈಸಲಿವೆ’ ಎಂದು ನಗರದ ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ಕರೆದಿದ್ದ ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದರು.

‘ಕೃಷಿಕರ ಹಾಗೂ ಕೃಷಿ ಕ್ಷೇತ್ರದ ಸುಧಾರಣೆಗೆ ಕೇಂದ್ರ ಸರ್ಕಾರ ಮಹತ್ವದ ತೀರ್ಮಾನ ತೆಗೆದುಕೊಂಡಿದೆ.
ಲೋಕಸಭೆ ಮತ್ತು ರಾಜ್ಯಸಭೆಗಳಲ್ಲಿ ರೈತರಿಗೆ ಸಂಬಂಧಿಸಿದ ಎರಡು ಪ್ರಮುಖ ಮಸೂದೆಗಳಿಗೆ ಅನುಮೋದನೆ ದೊರೆತಿದೆ’ ಎಂದು ಹೇಳಿದರು.

‘ಹೊಸ ಮಸೂದೆಯಲ್ಲಿ ರೈತರು ತಮಗಿಷ್ಟ ಬಂದ ಕಡೆಗೆ ಕೃಷಿ ಉತ್ಪನ್ನ ಮಾರಾಟ ಮಾಡಲು ಅವಕಾಶ ಕಲ್ಪಿಸಲಾಗಿದೆ. ಕೃಷಿ ಉತ್ಪನ್ನಗಳ ಪಾರದರ್ಶಕತೆ ಹಾಗೂ ವ್ಯಾಪಾರ ಉತ್ತೇಜನಕ್ಕೆ ಒತ್ತು ಕೊಡಲಾಗಿದೆ. ಆನ್‌ಲೈನ್‌ ಮೂಲಕ ವ್ಯಾಪಾರ ಸಹ ಮಾಡಲು ಅವಕಾಶ ಕಲ್ಪಿಸಲಾಗಿದೆ’ ಎಂದು ತಿಳಿಸಿದರು.

‘ರೈತರು ವಿರೋಧ ಪಕ್ಷಗಳ ಮಾತಿಗೆ ಕಿವಿಗೊಡಬಾರದು. ಕೃಷಿ ಉತ್ಪನ್ನಗಳಿಗೆ ಉತ್ತಮ ಬೆಲೆ ಕಲ್ಪಿಸಿಕೊಡುವ ದಿಸೆಯಲ್ಲಿ ರೈತರು ಮಸೂದೆಗಳನ್ನು ಬೆಂಬಲಿಸಬೇಕು’ ಎಂದು ಮನವಿ ಮಾಡಿದರು.

‘ಈಶಾನ್ಯ ಕರ್ನಾಟಕ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಶಶಿಲ್ ನಮೋಶಿ ಅವರ ಹೆಸರನ್ನು ಪಕ್ಷದ ರಾಜ್ಯ ಕೋರ್ ಕಮಿಟಿಯಿಂದ ಕೇಂದ್ರ ಸಮಿತಿಗೆ ಶಿಫಾರಸು ಮಾಡಲಾಗಿದೆ. ನಮೋಶಿ ಅವರು ಮೂರು ಬಾರಿ ವಿಧಾನ ಪರಿಷತ್‌ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದಾರೆ. ಶಿಕ್ಷಕರ ಹಾಗೂ ಸರ್ಕಾರಿ ನೌಕರರ ಸಮಸ್ಯೆಗಳಿಗೆ ಸ್ಪಂದಿಸಿದ್ದಾರೆ’ ಎಂದು ತಿಳಿಸಿದರು.

ವಿಧಾನ ಪರಿಷತ್‌ ಸದಸ್ಯ ರಘುನಾಥ ಮಲ್ಕಾಪುರೆ, ಬಿಜೆಪಿ ಮುಖಂಡ ಶಶಿಲ್ ನಮೋಶಿ, ಬಿಜೆಪಿ ಬೀದರ್‌ ಜಿಲ್ಲಾ ಘಟಕದ ಅಧ್ಯಕ್ಷ ಶಿವಾನಂದ ಮಂಠಾಳಕರ್, ಜಿಲ್ಲಾ ಕಿಸಾನ್‌ ಮೋರ್ಚಾದ ಚಂದ್ರಶೇಖರ್ ಕೇಶಕರ್, ವಿಭಾಗ ಪ್ರಮುಖ ಈಶ್ವರಸಿಂಗ್‌ ಠಾಕೂರ್ ಹಾಗೂ ಅರವಿಂದ ಸಾವಳಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT