ಬಸವಕಲ್ಯಾಣ: ಇಲ್ಲಿಗೆ ಸಮೀಪದ ಸಸ್ತಾಪುರ ಬಂಗ್ಲಾ ಬಳಿ ಬಯೋ ಡೀಸೆಲ್ ಎಂದು ನಂಬಿಸಿ ಮಾರಾಟ ಮಾಡುತ್ತಿದ್ದ ₹22.5 ಲಕ್ಷ ಮೌಲ್ಯದ ಮಿಕ್ಸ್ ಹೈಡ್ರೋ ಕಾರ್ಬನ್ ಆಯಿಲ್ ಅನ್ನು ಇಲ್ಲಿನ ಗ್ರಾಮೀಣ ಠಾಣೆ ಪೊಲೀಸರು ಜಪ್ತಿ ಮಾಡಿಕೊಂಡಿದ್ದಾರೆ.

30 ಸಾವಿರ ಲೀಟರ್ ಆಯಿಲ್, ₹16,400 ನಗದು ಹಾಗೂ ಟ್ಯಾಂಕರ್ ಜಪ್ತಿ ಮಾಡಲಾಗಿದೆ. ಹುಮನಾಬಾದ್‌ನ ಇಮಾಮುದ್ದೀನ್ ಹಾಗೂ ಲಾರಿ ಚಾಲಕ ಉತ್ತರ ಪ್ರದೇಶ ಮೂಲದ ನಿರಜ ಎನ್ನುವವರನ್ನು ಬಂಧಿಸಲಾಗಿದೆ. ಸಿಪಿಐ ರಘುವೀರಸಿಂಗ್ ಠಾಕೂರ ನೇತೃತ್ವದಲ್ಲಿ ದಾಳಿ ನಡೆದಿದೆ.

ಇದಲ್ಲದೆ ಬಯೋ ಡೀಸೆಲ್ ಮಾರಾಟಕ್ಕೆ ಸಂಬಂಧಿಸಿದ ಇನ್ನೊಂದು ಪ್ರಕರಣದಲ್ಲಿ ನಗರ ಠಾಣೆಯಿಂದ ಇತರ ನಾಲ್ವರನ್ನು ಬಂಧಿಸಲಾಗಿದೆ. ಬಯೋ ಡೀಸೆಲ್ ಅಕ್ರಮವಾಗಿ ಮಾರಾಟ ಮಾಡುತ್ತಿರುವುದು ವ್ಯಾಪಕವಾಗಿ ನಡೆಯುತ್ತಿರುವ ಕಾರಣ ರಾಷ್ಟ್ರೀಯ ಹೆದ್ದಾರಿಯಲ್ಲಿ ತಪಾಸಣೆ ಚುರುಕುಗೊಳಿಸಲಾಗಿದೆ. ಡಿವೈಎಸ್ಪಿ ಸೋಮಲಿಂಗ ಕುಂಬಾರ ಹಾಗೂ ಸಿಪಿಐ ರಘುವೀರಸಿಂಗ್ ಠಾಕೂರ ನೇತೃತ್ವದಲ್ಲಿ ಟ್ಯಾಂಕರ್‌ಗಳನ್ನು ಹಾಗೂ ಇತರ ವಾಹನಗಳನ್ನು ತಪಾಸಣೆಗೊಳಪಡಿಸಿ ನಂತರವೇ ಸಂಚರಿಸಲು ಅನುವು ಮಾಡಿಕೊಡಲಾಗಿದೆ ಎಂದು ತಿಳಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.