ಮಿಶ್ರ ತಳಿ ಮೀನು ಸಾಕಾಣಿಕೆ ಲಾಭದಾಯಕ

ಜನವಾಡ: ಮಿಶ್ರ ತಳಿ ಮೀನು ಸಾಕಾಣಿಕೆ ಹೆಚ್ಚು ಲಾಭದಾಯಕವಾಗಿದೆ ಎಂದು ಮೀನುಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಡಾ. ಮಲ್ಲೇಶ ಬಿ. ತಿಳಿಸಿದರು.
ಬೀದರ್ ತಾಲ್ಲೂಕಿನ ಜನವಾಡ ಸಮೀಪದ ಕೃಷಿ ವಿಜ್ಞಾನ ಕೇಂದ್ರವು ವೈಜ್ಞಾನಿಕ ಮೀನು ಸಾಕಾಣಿಕೆ ಮತ್ತು ಮೀನುಗಾರಿಕೆ ಇಲಾಖೆ ಯೋಜನೆಗಳ ಕುರಿತು ರೈತರಿಗೆ ಶನಿವಾರ ಆನ್‍ಲೈನ್‍ನಲ್ಲಿ ಆಯೋಜಿಸಿದ್ದ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಬೀದರ್ ಜಿಲ್ಲೆಯಲ್ಲಿ ಒಳನಾಡು ಮೀನುಗಾರಿಕೆಗೆ ಉತ್ತಮ ವಾತಾವರಣ ಇದೆ. ರೈತರು ಇದರ ಪ್ರಯೋಜನ ಪಡೆಯಬೇಕು ಎಂದು ಸಲಹೆ ಮಾಡಿದರು.
ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ. ಸುನೀಲಕುಮಾರ ಎನ್.ಎಂ ಅವರು, ಮೀನುಗಾರಿಕೆ ಅವಕಾಶಗಳ ಕುರಿತು ಮಾಹಿತಿ ನೀಡಿದರು.
ಬೀದರ್ ಜಿಲ್ಲೆ ಹಾಗೂ ರಾಜ್ಯದ 65 ಜನ ರೈತರು ತರಬೇತಿಯಲ್ಲಿ ಭಾಗವಹಿಸಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.