ಭಾನುವಾರ, ಜುಲೈ 25, 2021
25 °C

ಮಡಿಕೇರಿ: ‘ಯೋಜನೆಗಳ ಸದ್ಬಳಕೆಯಿಂದ ಪ್ರಗತಿ’: ಶಾಸಕ ಬಂಡೆಪ್ಪ ಕಾಶೆಂಪೂರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿಟಗುಪ್ಪ: ‘ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಯೋಜನೆಗಳು ಸಮರ್ಪಕವಾಗಿ ಸದ್ಬಳಕೆ ಆದಾಗ ಮಾತ್ರ ಸಮಾಜದ ಪ್ರಗತಿ ಸಾಧ್ಯ’ ಎಂದು ಶಾಸಕ ಬಂಡೆಪ್ಪ ಕಾಶೆಂಪೂರ ಹೇಳಿದರು.

ತಾಲ್ಲೂಕಿನ ಮನ್ನಾಎಖ್ಖೇಳಿ ಗ್ರಾಮದಲ್ಲಿ ಜನೌಷಧಿ ಕೇಂದ್ರ ಉದ್ಘಾಟಿಸಿ ಅವರು ಮಾತನಾಡಿದರು.

‘ಕ್ಷೇತ್ರದ ನಿರ್ಣಾ, ಬಗದಲ್, ಕಮಠಾಣ, ಮನ್ನಳ್ಳಿ ಗ್ರಾಮಗಳಲ್ಲಿಯ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಆಂಬುಲೆನ್ಸ್‌ ಸೌಲಭ್ಯ ಒದಗಿಸಲಾಗಿದೆ. ಮನ್ನಾಎಖ್ಖೇಳಿ ಕೇಂದ್ರದಲ್ಲಿ ಕಣ್ಣಿನ ಪರೀಕ್ಷಾ ಸೌಲಭ್ಯ ಕಲ್ಪಿಸಲಾಗಿದೆ. ಸರ್ಕಾರ ಯಾವುದೇ ಇರಲಿ ಜನಪ್ರತಿನಿಧಿಗಳ ಹಿತಾಸಕ್ತಿ ಇದ್ದಲ್ಲಿ ಮಾತ್ರ ಪ್ರಗತಿ ಕಾಣಲು ಸಾಧ್ಯ’ ಎಂದು ತಿಳಿಸಿದರು.

ಜೆಡಿಎಸ್ ಮುಖಂಡ ಸಂತೋಷ ರಾಸೂರ್. ಪಾಂಡಪ್ಪ ನಿಡವಂಚಿ, ಮಲ್ಲಪ್ಪ ಗಣಗೊಂಡ್, ಅಮರ್, ಝರಣಪ್ಪ ಬೋರಾಳ, ಇತಾಯತ ಅಲಿ ಹವಾಲ್ದಾರ್ ಹಾಗೂ ಖೈರೋದ್ದಿನ್ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು