ಸೋಮವಾರ, 15 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಹುಮನಾಬಾದ್ | ಹಲ್ಲೆ ಪ್ರಕರಣ: ಶಾಸಕನ ಸಹೋದರನ ಬಂಧನ

Published 22 ಜೂನ್ 2024, 23:30 IST
Last Updated 22 ಜೂನ್ 2024, 23:30 IST
ಅಕ್ಷರ ಗಾತ್ರ

ಹುಮನಾಬಾದ್ (ಬೀದರ್‌ ಜಿಲ್ಲೆ): ತಾಲ್ಲೂಕಿನ ಕಠಳ್ಳಿ ಗ್ರಾಮದಲ್ಲಿ ಜೆಜೆಎಂ ಕಾಮಗಾರಿ ಕಳಪೆಯಾಗಿರುವುದನ್ನು ಪ್ರಶ್ನಿಸಿದ್ದ ವ್ಯಕ್ತಿಯ ಮೇಲೆ ಈಚೆಗೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಡಾ.ಸಿದ್ದಲಿಂಗಪ್ಪ ಪಾಟೀಲ ಅವರ ಸಹೋದರ ಸುನೀಲ ಪಾಟೀಲ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಕಠಳ್ಳಿಯ ಬಸವರಾಜ ಪಾಟೀಲ ಎಂಬುವವರ ಮೇಲೆ ಶಾಸಕರ ಸಹೋದರರೂ ಸೇರಿ ಇತರರು ಮೇ 31ರಂದು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಹುಮನಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಹಲ್ಲೆಗೊಳಗಾಗಿದ್ದ ಬಸವರಾಜ ಅವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದ ಮಾಜಿ ಸಚಿವ ರಾಜಶೇಖರ ಪಾಟೀಲ ಅವರು, ಹಲ್ಲೆ ಮಾಡಿದ ಆರೋಪಿಗಳನ್ನು ಬಂಧಿಸಬೇಕು ಎಂದು ಒತ್ತಾಯಿಸಿದ್ದರು. ಬಳಿಕ ಪೊಲೀಸರು ಕೆಲ ಆರೋಪಿಗಳನ್ನು ಬಂಧಿಸಿದ್ದರು.

ಶಾಸಕರ ಇಬ್ಬರು ಸಹೋದರರಾದ ಸುನೀಲ ಪಾಟೀಲ, ಸಂತೋಷ್ ಪಾಟೀಲ ನಾಪತ್ತೆಯಾಗಿದ್ದರು. ಅವರನ್ನು ಕೂಡಲೇ ಬಂಧಿಸಬೇಕು. ಇಲ್ಲದಿದ್ದರೆ ಪ್ರತಿಭಟನೆ ನಡೆಸಲಾಗುವುದು ಎಂದೂ ಅವರು ಎಚ್ಚರಿಕೆ ನೀಡಿದ್ದರು.

ಪೊಲೀಸ್ ಅಧಿಕಾರಿಗಳು ವಿಶೇಷ ತಂಡಗಳನ್ನು ರಚಿಸಿ ವಿವಿಧೆಡೆ ಶೋಧ ನಡೆಸಿದ್ದರು. ಮಹಾರಾಷ್ಟ್ರದ ತ್ರಯಂಬಕೇಶ್ವರದಲ್ಲಿ ಸುನೀಲ ಪಾಟೀಲ ಅವರನ್ನು ಬಂಧಿಸಿದ್ದಾರೆ. ಇನ್ನೊಬ್ಬ ಸಹೋದರ ಸಂತೋಷ್ ಪಾಟೀಲ ಅವರಿಗಾಗಿ ಪೊಲೀಸರು ಶೋಧ ನಡೆಸಿದ್ದಾರೆ.

ಪಟ್ಟಣದಲ್ಲಿ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT