ಶನಿವಾರ, 20 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಚಿಟಗುಪ್ಪ | ಮಳೆ ಹಾನಿ: ಶಾಸಕರಿಂದ ಪರಿಶೀಲನೆ

Published 15 ಜೂನ್ 2024, 15:28 IST
Last Updated 15 ಜೂನ್ 2024, 15:28 IST
ಅಕ್ಷರ ಗಾತ್ರ

ಚಿಟಗುಪ್ಪ: ಎರಡು ದಿನಗಳ ಹಿಂದೆ ಸುರಿದ ಮಳೆಯಿಂದ ತಾಲ್ಲೂಕಿನ ವಿವಿಧೆಡೆ ಹಾನಿಯಾದ ರಸ್ತೆ, ಸೇತುವೆಯನ್ನು ಶನಿವಾರ ಶಾಸಕ ಡಾ.ಸಿದ್ಧಲಿಂಗಪ್ಪ ಪಾಟೀಲ ಭೇಟಿ ನೀಡಿ ವೀಕ್ಷಿಸಿದರು.

ತಾಲ್ಲೂಕಿನ ಉಡಬಾಳ–ಮುಸ್ತರಿ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿನ ಸೇತುವೆ ಕೊಚ್ಚಿಕೊಂಡು ಹೋಗಿದ್ದು ಜನಸಂಚಾರಕ್ಕೆ ಕಷ್ಟವಾಗುತ್ತಿದೆ. ಹೀಗಾಗಿ ಅಧಿಕಾರಿಗಳು ತಕ್ಷಣ ದುರಸ್ತಿ ಕಾರ್ಯ ಕೈಗೊಂಡು ಜನರಿಗೆ ಅನುಕೂಲ ಮಾಡಿಕೊಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ತಹಶೀಲ್ದಾರ್‌ ರವೀಂದ್ರ ದಾಮಾ, ಕಂದಾಯ ನಿರೀಕ್ಷಕ ಮಹಾರುದ್ರ, ಸಾಗರ ಪಾಟೀಲ್‌, ಚಂದು, ಗೋಪಾಲಕೃಷ್ಣ, ಪಪ್ಪುರಾಜ್‌ ಇತರರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT