ಬಾಪುರ (ಜನವಾಡ): ಬೀದರ್ ತಾಲ್ಲೂಕಿನ ಬಾಪುರ ಗ್ರಾಮದಲ್ಲಿ ₹ 20 ಲಕ್ಷ ವೆಚ್ಚದ ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗೆ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಶುಕ್ರವಾರ ಚಾಲನೆ ನೀಡಿದರು.

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ನಿಧಿಯ ಅನುದಾನದಲ್ಲಿ ಗ್ರಾಮದ ಮುಖ್ಯದ್ವಾರದಿಂದ ಗ್ರಾಮದವರೆಗೆ ರಸ್ತೆ ನಿರ್ಮಾಣ ಮಾಡಲಾಗುತ್ತಿದೆ ಎಂದು ಅವರು ತಿಳಿಸಿದರು.

ಗುಣಮಟ್ಟದೊಂದಿಗೆ ಕಾಮಗಾರಿ ಕೈಗೊಳ್ಳಬೇಕು ಎಂದು ಗುತ್ತಿಗೆದಾರರಿಗೆ ಸೂಚಿಸಿದರು.

ಕ್ಷೇತ್ರದ ಸಮಗ್ರ ಅಭಿವೃದ್ಧಿಯೇ ನನ್ನ ಗುರಿಯಾಗಿದೆ. ಕ್ಷೇತ್ರ ವ್ಯಾಪ್ತಿಯ ಗ್ರಾಮಗಳಿಗೆ ರಸ್ತೆ, ಒಳಚರಂಡಿ, ವಿದ್ಯುತ್, ಕುಡಿಯುವ ನೀರು ಮೊದಲಾದ ಸೌಕರ್ಯ ಕಲ್ಪಿಸುವ ದಿಸೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದೇನೆ ಎಂದು ತಿಳಿಸಿದರು.

ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳನ್ನು ಕ್ಷೇತ್ರಕ್ಕೆ ತರಲು ನಿರಂತರ ಪ್ರಯತ್ನಿಸುತ್ತಿದ್ದೇನೆ ಎಂದು ಹೇಳಿದರು.

ಮುಖಂಡರಾದ ಗುರುನಾಥ ರಾಜಗೀರಾ, ಬಕ್ಕಪ್ಪ ಬಸರೆಡ್ಡಿ, ಹೇಮಾ ತುಕ್ಕಾರೆಡ್ಡಿ, ವೀರೇಶ್ ಪಾಟೀಲ, ಸಂತೋಷ್ ಜಗದಾಳೆ, ಓಂಕಾರ ಸ್ವಾಮಿ, ನಿತೀಶ್ ಗುಂಡೂರಾವ್, ಆನಂದ ರೆಡ್ಡಿ, ಕಲ್ಯಾಣರಾವ್ ಬಿರಾದಾರ, ಕಲ್ಯಾಣರಾವ್ ಬಾಪುರ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.