ಕಮಲನಗರ: ಪಟ್ಟಣದ ವಿವಿಧ ವಾರ್ಡ್ಗಳಲ್ಲಿ ₹ 1.80 ಕೋಟಿ ವೆಚ್ಚದ ಸಿಸಿ ರಸ್ತೆ ಹಾಗೂ ಚರಂಡಿ ಕಾಮಗಾರಿಗಳಿಗೆ ಶಾಸಕ ಪ್ರಭು ಬಿ. ಚವಾಣ್ ಭೂಮಿ ಪೂಜೆ ನೆರವೇರಿಸಿದರು.

ಈ ವೇಳೆ ಮಾತನಾಡಿದ ಅವರು, ‘ಎಲ್ಲ ಕಾಮಗಾರಿಗಳನ್ನು ಸರಿಯಾಗಿ ಮಾಡಬೇಕು. ಕ್ಯೂರಿಂಗ್ ಆಗಬೇಕು. ವಿಳಂಬ, ನಿರ್ಲಕ್ಷ್ಯ ಅಥವಾ ಗುಣಮಟ್ಟದಲ್ಲಿ ಲೋಪ ಕಂಡು ಬಂದರೆ ಯಾವುದೇ ಕಾರಣಕ್ಕೂ ಸಹಿವುದಿಲ್ಲ. ಬಿಲ್ಲುಗಳನ್ನು ಮಾಡಲು ಬಿಡುವುದಿಲ್ಲ’ ಎಂದು ಅಧಿಕಾರಿಗಳು ಮತ್ತು ಗುತ್ತಿಗೆದಾರರಿಗೆ ಎಚ್ಚರಿಸಿದರು.

ಸಾರ್ವಜನಿಕರು ಕೂಡ ಕಾಮಗಾರಿಗಳ ಮೇಲೆ ನಿಗಾ ವಹಿಸಬೇಕು. ಕಾಮಗಾರಿ ಸರಿಯಾಗಿ ನಡೆಯುವಂತೆ ಮುತುವರ್ಜಿ ವಹಿಸಬೇಕು. ಕಾಮಗಾರಿ ನಡೆಯುವ ವೇಳೆ ಯಾವುದಾದರೂ ಲೋಪಗಳು, ಗುಣಮಟ್ಟದ ಕೊರತೆ ಕಂಡುಬಂದರೆ ತಕ್ಷಣ ನನ್ನ ಗಮನಕ್ಕೆ ತರಬೇಕೆಂದು ಮನವಿ ಮಾಡಿದರು.

ಭೂಮಿ ಪೂಜೆ : ತಾಲ್ಲೂಕಿನ ಹೊಳಸಮುದ್ರದಲ್ಲಿ ₹ 70 ಲಕ್ಷ ಮೊತ್ತದಲ್ಲಿ ಕೈಗೊಂಡಿರುವ ಸಿಸಿ ರಸ್ತೆ ಮತ್ತು ಚರಂಡಿ ಕಾಮಗಾರಿಗೆ ಶಾಸಕ ಚವಾಣ್ ಭೂಮಿ ಪೂಜೆ ನೆರವೇರಿಸಿದರು. ಇದೇ ವೇಳೆ ಗ್ರಾಮಸ್ಥರ ಅಹವಾಲುಗಳನ್ನು ಆಲಿಸಿದರು.

ಈ ಸಂದರ್ಭದಲ್ಲಿ ಮುಖಂಡರಾದ ರಾಮಶೆಟ್ಟಿ ಪನ್ನಾಳೆ, ಶಿವಾನಂದ ವಡ್ಡೆ, ಧೊಂಡಿಬಾ ನರೋಟೆ, ಮಲ್ಲಪ್ಪ ದಾನಾ, ಅರಹಂತ ಸಾವಳೆ, ಕಿರಣ ಪಾಟೀಲ, ನಾಗೇಶ ಪತ್ರೆ, ಸಂತೋಷ ಸೊಲ್ಲಾಪೂರೆ, ಸಂಜುಕುಮಾರ, ಮಲ್ಲು ನವಾಡೆ, ರಂಗರಾವ ಜಾಧವ, ಮಹಾದೇವ ಮಾಳಕಾರಿ, ಮಹಾದೇವ ಚಾಂಗುಣೆ, ರವಿ ಕಾರಬಾರಿ, ಬಾಬುರಾವ ಸೇರಿದಂತೆ ಮುಖಂಡರು, ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.