ಗುರುವಾರ, 21 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹುಮನಾಬಾದ್: ಕೈಗಾರಿಕಾ ಪ್ರದೇಶಕ್ಕೆ ಶಾಸಕ ಸಿದ್ದು ಪಾಟೀಲ ಭೇಟಿ, ಪರಿಶೀಲನೆ

Published 4 ಜೂನ್ 2023, 13:56 IST
Last Updated 4 ಜೂನ್ 2023, 13:56 IST
ಅಕ್ಷರ ಗಾತ್ರ

ಹುಮನಾಬಾದ್: ಪಟ್ಟಣದ ಹೊರವಲಯದ ಕೈಗಾರಿಕಾ ಪ್ರದೇಶದ ಸುತ್ತಮುತ್ತಲಿನ ಗ್ರಾಮಗಳ ದೂರಿನನ್ವಯ ಶಾಸಕ ಸಿದ್ದು ಪಾಟೀಲ ಅವರು, ಕೈಗಾರಿಕಾ ಪ್ರದೇಶಕ್ಕೆ ಅಧಿಕಾರಿಗಳ ತಂಡದೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ವಿಷಪೂರಿತ ರಾಸಾಯನಿಕ ಗಾಳಿ ಹೊರಬಿಡುತ್ತಿರುವ ಕಾರ್ಖಾನೆಗಳ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ನಂತರ ಅರಣ್ಯ ಮತ್ತು ಪರಿಸರ ಮಾಲಿನ್ಯ ನಿಯಂತ್ರಣ ಸಚಿವ ಈಶ್ವರ ಖಂಡ್ರೆ ಅವರ ಆದೇಶದ ಮೇರಿಗೆ ಭಾರತೀಯ ಅರಣ್ಯ ಮುಖ್ಯ ಪ್ರಧಾನ ಸಂರಕ್ಷಣಾ ಅಧಿಕಾರಿ ಬ್ರಿಜೇಶ್ ಕುಮಾರ್ ನೇತೃತ್ವದ ತಂಡ ಇಲ್ಲಿಯ ಕೆಲ ಕಾರ್ಖಾನೆಗಳಿಗೆ ಶನಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂಬುವುದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತು. ಈ ಬಗ್ಗೆ ಮಾಹಿತಿ ಕೇಳಲು ಬೀದರ್ ಪರಿಸರ ಮಾಲಿನ್ಯ ನಿಯಂತ್ರಣದ ಪ್ರಭಾರ ಅಧಿಕಾರಿ ಮಂಜಪ್ಪ ಅವರನ್ನು ದೂರವಾಣಿ ಕರೆ ಹಾಗೂ ವಾಟ್ಸ್‌ಆ್ಯಪ್‌ನಲ್ಲಿ ಮಾಹಿತಿ ಕೇಳಿದರೂ ಪ್ರತಿಕ್ರಿಯಿಸಲಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT