ಬೀದರ್: ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ ನಡೆಸಿ ಶಾಸಕ ಪ್ರಭು ಚವಾಣ್ ಅವರ ಮಗ ಪ್ರತೀಕ್ ಚವಾಣ್ ವಂಚಿಸಿದ್ದಾರೆ ಎಂದು ಸಂತ್ರಸ್ತೆ ಯುವತಿ ಠಾಣೆಗೆ ದೂರು ಸಲ್ಲಿಸಿರುವುದರಿಂದ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕರು ಅವರ ಸ್ಥಾನಕ್ಕೆ ರಾಜೀನಾಮೆಗೆ ನೀಡಬೇಕೆಂದು ಕನ್ನಡಿಗರ ರಕ್ಷಣಾ ವೇದಿಕೆ ಆಗ್ರಹಿಸಿದೆ.

ಈ ಸಂಬಂಧ ವೇದಿಕೆಯ ವೇದಿಕೆ ಪದಾಧಿಕಾರಿಗಳು ರಾಜ್ಯಪಾಲರ ಹೆಸರಿಗೆ ಬರೆದ ಮನವಿ ಪತ್ರವನ್ನು ನಗರದಲ್ಲಿ ಗುರುವಾರ ಜಿಲ್ಲಾಧಿಕಾರಿಗೆ ಸಲ್ಲಿಸಿ ಒತ್ತಾಯಿಸಿದರು.

ಸಂತ್ರಸ್ತೆ ಯುವತಿ ಆಕೆಯ ಮೇಲಾದ ದೌರ್ಜನ್ಯದ ಕುರಿತು ಮಹಿಳಾ ಪೊಲೀಸ್ ಠಾಣೆ ಹಾಗೂ ರಾಜ್ಯ ಮಹಿಳಾ ಆಯೋಗಕ್ಕೆ ದೂರು ಸಲ್ಲಿಸಿದ್ದಾಳೆ. ಶಾಸಕ ಚವಾಣ್ ಅವರು ತಮ್ಮ ರಾಜಕೀಯ ಪ್ರಭಾವ ಬಳಸಿಕೊಂಡು ಯುವತಿಯ ಪೋಷಕರು, ಸಂಬಂಧಿಕರ ವಿರುದ್ಧ ಪ್ರಕರಣ ದಾಖಲಿಸುವಂತೆ ಮಾಡಿದ್ದಾರೆ. ಕೂಡಲೇ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ಸಲ್ಲಿಸಬೇಕು. ಇಲ್ಲವಾದಲ್ಲಿ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ವೇದಿಕೆಯ ಜಿಲ್ಲಾಧ್ಯಕ್ಷ ಶ್ರೀಕಾಂತ ಭವಾನಿ, ಜಿಲ್ಲಾ ಗೌರವ ಅಧ್ಯಕ್ಷ ಸುರೇಶ ಕನ್ನಾಳೆ, ಪ್ರಚಾರ ಸಮಿತಿ ರಾಜ್ಯ ಉಪಾಧ್ಯಕ್ಷ ರಾಘವೇಂದ್ರ, ಸಹ ಕಾರ್ಯದರ್ಶಿ ಮಾಣಿಕ ಮೇತ್ರ, ಜಿಲ್ಲಾ ಉಪಾಧ್ಯಕ್ಷ ಆನಂದ ಪಾಟೀಲ್, ಜಿಲ್ಲಾ ಕಾರ್ಯದರ್ಶಿ ವಿಜಯಕುಮಾರ ಮೋರ್ಗಿಕರ್, ವಿದ್ಯಾರ್ಥಿ ಘಟಕದ ಜಿಲ್ಲಾಧ್ಯಕ್ಷ ಈಶ್ವರ ಯರನಳ್ಳಿ, ನಗರ ಅಧ್ಯಕ್ಷ ಸ್ಟಾಲಿನ್ ಕೋಟೆ, ಕಾರ್ಮಿಕ ಘಟಕದ ಸುಜೀತಕುಮಾರ ಕೋಟೆ, ವಿದ್ಯಾರ್ಥಿ ಘಟಕದ ಅಭಿಷೇಕ್, ಅಲ್ಪಸಂಖ್ಯಾತರ ಘಟಕದ ಗುಲಾಮ ಅಲಿ, ವೀರ ಕನ್ನಡಿಗರ ಸೇನೆ ರಾಜ್ಯ ಸಂಚಾಲಕ ಸುಬ್ಬಣ್ಣ ಕರಕನಳ್ಳಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.